ಮೋರ್ಬಿ ಸೇತುವೆ ದುರಂತ: ಪ್ರಧಾನಿ ಮೋದಿ ಅಹಮದಾಬಾದ್ ರೋಡ್ ಶೋ ರದ್ದು

ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆ ಇಂದು ಕುಸಿದು ಬಿದ್ದಿದ್ದು ದೊಡ್ಡ ದುರಂತ ಸಂಭವಿಸಿದೆ. ಇನ್ನು ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಗಾಂಧಿನಗರ: ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆ ಇಂದು ಕುಸಿದು ಬಿದ್ದಿದ್ದು ದೊಡ್ಡ ದುರಂತ ಸಂಭವಿಸಿದೆ. ಇನ್ನು ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ದುರಂತದಲ್ಲಿ ಈವರೆಗೆ ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದ್ದು, ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್ ಕಾರ್ಯಕ್ರಮಗಳು ರದ್ದಾಗಿವೆ. ಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್ ಪ್ರವಾಸ ನಿಗದಿಯಾಗಿತ್ತು.

ಅಹಮದಾಬಾದ್‌ನಲ್ಲಿ ಇಂದು ಮೋದಿ ಅವರ ರೋಡ್‌ ಶೋ ನಿಗದಿಯಾಗಿಯಾಗಿತ್ತು. ಆದರೆ ಸೇತುವೆ ದುರಂತ ಸಂಭವಿಸಿದ್ದರಿಂದ ಮೋದಿ ಈ ಕಾರ್ಯಕ್ರಮ ರದ್ದಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಆಗಮಿಸಿ ದುರಂತದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನೂರಾರು ಜನರು ಸೇತುವೆ ಮೇಲೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇಲ್ಲಿಯವರೆಗೂ 30 ಮಕ್ಕಳ ಸೇರಿದಂತೆ 80 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com