ಲಂಚ ಪ್ರಕರಣ: ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್; ತಡೆಯಾಜ್ಞೆ ವಿಸ್ತರಿಸಿದ 'ಸುಪ್ರೀಂ'

ಲಂಚ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ನವದೆಹಲಿ/ಬೆಂಗಳೂರು: ಲಂಚ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

ಸುಪ್ರೀಂ ಕೋರ್ಟ್ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆ ಇಂದಿಗೆ ಕೊನೆಗೊಂಡಿತ್ತು. ಈ ಹಿನ್ನೆಲೆಯಲ್ಲಿ ತಡೆಯಾಜ್ಞೆಯನ್ನು ಮುಂದುವರೆಸುವಂತೆ ಮನವಿ ಮಾಡಿದ್ದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ತಡೆಯಾಜ್ಞೆ ವಿಸ್ತರಿಸಿ ಆದೇಶ ನೀಡಿದೆ.

ಭೂ ಹಂಚಿಕೆ ಹಗರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು.

ಮಾಜಿ ಸಿಎಂ ಬಿ.ಎಸ್ . ಯಡಿಯೂರಪ್ಪ 2006-7ರಲ್ಲಿ ಉಪಮುಖ್ಯಮಂತ್ರಿಯಾಗಿದ್ದಾಗ ಅಕ್ರಮವಾಗಿ ಎಕರೆಗಟ್ಟಲೆ ಭೂಮಿಯನ್ನು ಡಿನೋಟಿಫೈ ಮಾಡಿ ಉದ್ಯಮಿಗಳಿಗೆ ಜಮೀನು ಮಂಜೂರು ಮಾಡಿದ ಆರೋಪ ಹೊತ್ತಿದ್ದಾರೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. 2020ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ರದ್ದುಗೊಳಿಸಬೇಕೆಂಬ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

2013ರಲ್ಲಿ ವಾಸುದೇವ ರೆಡ್ಡಿ ಎಂಬುವರು ಖಾಸಗಿ ದೂರಿನ ಮೇರೆಗೆ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಮಾಜಿ ಮುಖ್ಯಮಂತ್ರಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಐಟಿ ಪಾರ್ಕ್ ಅಭಿವೃದ್ಧಿ ಪಡಿಸಲು ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com