ಕಲ್ಲಿದ್ದಲು ಕಳ್ಳ ಸಾಗಣೆ ಕೇಸ್: ಇಡಿ ವಿಚಾರಣೆಗೆ ಅಭಿಷೇಕ್ ಬ್ಯಾನರ್ಜಿ ಹಾಜರು
ಕಲ್ಲಿದ್ದಲು ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.
Published: 02nd September 2022 12:48 PM | Last Updated: 02nd September 2022 12:48 PM | A+A A-

ಅಭಿಷೇಕ್ ಬ್ಯಾನರ್ಜಿ
ಕೊಲ್ಕತ್ತ: ಕಲ್ಲಿದ್ದಲು ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.
ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಕೊಲ್ಕತ್ತಾದ ಬಳಿಯ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ವಿಚಾರಣೆ ನಡೆಸಲು ಐವರು ಅಧಿಕಾರಿಗಳನ್ನೊಳಗೊಂಡ ಇಡಿ ಅಧಿಕಾರಿಗಳ ತಂಡ ಗುರುವಾರ ರಾತ್ರಿಯೇ ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ.
ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರ ಸೋದರಳಿಯನ ತನಿಖೆ ಹಿನ್ನೆಲೆಯಲ್ಲಿ ಇಡಿ ಕಚೇರಿ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಅಭಿಷೇಕ್ ಬ್ಯಾನರ್ಜಿ ಅವರನ್ನು ಇಡಿ ವಿಚಾರಣೆ ನಡೆಸಿತ್ತು.