ಕಾಶ್ಮೀರ: ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನ ಮೇಲೆ ಉಗ್ರರಿಂದ ಗುಂಡಿನ ದಾಳಿ, ಗಾಯ

ದಕ್ಷಿಣ ಕಾಶ್ಮೀರ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಉಗ್ರಗಾಮಿಗಳು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರೊಬ್ಬರ ಮೇಲೆ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ದಕ್ಷಿಣ ಕಾಶ್ಮೀರ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಉಗ್ರಗಾಮಿಗಳು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರೊಬ್ಬರ ಮೇಲೆ ನಡೆಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಉಗರ್ ಗುಂದ ಪ್ರದೇಶದಲ್ಲಿ  ಉಗ್ರರು ಇಂದು ಬೆಳಗ್ಗೆ  ಪಶ್ಚಿಮ  ಬಂಗಾಳದಿಂದ ಬಂದಿದ್ದ ಮುನೀರ್-ಉಲ್-ಇಸ್ಲಾಮ್ ಎಂಬ ವಲಸೆ ಕಾರ್ಮಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಆತ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿದ್ದ ವಲಸೆ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಉಗ್ರರ ದಾಳಿ ನಡೆಯುತ್ತಿದ್ದಂತೆಯೇ, ಸಿಆರ್ ಪಿಎಫ್, ಪೊಲೀಸ್ ಮತ್ತು ಸೈನಿಕರು ಸ್ಥಳಕ್ಕೆ ಧಾವಿಸಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಒಂದು ತಿಂಗಳಲ್ಲಿ ಕಾಶ್ಮೀರದಲ್ಲಿ ವಲಸೆ ಕಾರ್ಮಿಕರು ಮತ್ತು ಅಲ್ಪಸಂಖ್ಯಾತ ಸಮುದಾಯದವರ ಮೇಲೆ ಉಗ್ರರು ನಡೆಸಿದ 5ನೇ ದಾಳಿ ಇದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com