2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಕ್ಕೆ ಕುಸಿಯಲಿದೆ: ನಿತೀಶ್ ಕುಮಾರ್

ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ಹೋರಾಡಿದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ಹೋರಾಡಿದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಹಳೆಯ ಮಿತ್ರಪಕ್ಷಗಳಾದ ತೇಜಸ್ವಿ ಯಾದವ್ ಅವರ ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಹೊಸ ಸರ್ಕಾರವನ್ನು ರಚಿಸಲು ಕಳೆದ ತಿಂಗಳು ಬಿಜೆಪಿ ಜೊತೆ ಮೈತ್ರಿ ಕಡಿದುಕೊಂಡ ನಂತರ ನಿತೀಶ್ ಕುಮಾರ್ ರಾಷ್ಟ್ರ ರಾಜಕೀಯ ವಿಚಾರಗಳಲ್ಲಿ ಸಕ್ರಿಯವಾಗಿದ್ದಾರೆ.

ಪಾಟ್ನಾದಲ್ಲಿ ನಡೆದ ಜೆಡಿಯು ಕಾರ್ಯಕಾರಿ ಸಭೆಯಲ್ಲಿ ಎರಡು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಒಂದು ನಿತೀಶ್ ಕುಮಾರ್‌ಗೆ ಪ್ರತಿಪಕ್ಷಗಳ ಏಕತೆಗಾಗಿ ಕೆಲಸ ಮಾಡಲು ಅಧಿಕಾರ ನೀಡುವುದು ಮತ್ತು ಇನ್ನೊಂದು ದೇಶದಲ್ಲಿ ಬಿಜೆಪಿಯಡಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ನಿರ್ಣಯ ಅಂಗೀಕರಿಸಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಬಿಜೆಪಿ ವಿರುದ್ಧ ಹೋರಾಟಕ್ಕಾಗಿ ಇತರ ಪಕ್ಷಗಳ ಉನ್ನತ ನಾಯಕರನ್ನು ಭೇಟಿ ಮಾಡಲು ಮುಂದಿನ ಕೆಲವು ದಿನಗಳಲ್ಲಿ ದೆಹಲಿಗೆ ಭೇಟಿ ನೀಡುವುದಾಗಿ ಖಚಿತಪಡಿಸಿದರು. ಆದರೆ ಅವರು ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ.

ರಾಜ್ಯದಲ್ಲಿ ಬಿಜೆಪಿ ಕೋಮು ಸೌಹಾರ್ದ ಕದಡಲು ಯತ್ನಿಸುತ್ತದೆ. ನಾವು ಪಂಚಾಯತ್‌ ಮಟ್ಟದಲ್ಲೇ ಜಾಗರೂಕರಾಗುವ ಮೂಲಕ ಅವರಿಗೆ ಪಾಠ ಕಲಿಸಬೇಕು" ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಮಣಿಪುರದ ಆರು ಜೆಡಿಯು ಶಾಸಕರ ಪೈಕಿ ಐವರು ಬಿಜೆಪಿಗೆ ಸೇರ್ಪಡೆಗೊಂಡಿರುವ ಬಗ್ಗೆ ಮಾತನಾಡಿ ಬಿಹಾರ ಸಿಎಂ, ಬಿಜೆಪಿ ಬೇರೆ ಪಕ್ಷಗಳಿಂದ ಗೆದ್ದ ಶಾಸಕರನ್ನು ಹೇಗೆ ಒಡೆಯುತ್ತಿದ್ದಾರೆ ಎಂಬುದನ್ನ ನೋಡಿ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com