ನಿರ್ಮಲಾ ಸೀತಾರಾಮನ್ ಅವರ ಅಶಿಸ್ತಿನ ನಡವಳಿಕೆಗೆ ತೆಲಂಗಾಣ ಸಚಿವ ಕೆ.ಟಿ ರಾಮರಾವ್ ಕಿಡಿ, ರಾಜಕೀಯ ಬೂಟಾಟಿಕೆ ಎಂದು ಟೀಕೆ!

ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡುವ ಅಕ್ಕಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಪಾಲು ಎಷ್ಟು ಎಂಬುದಕ್ಕೆ ಉತ್ತರ ನೀಡಲು ಸಾಧ್ಯವಾಗದ ಜಿಲ್ಲಾಧಿಕಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಛೀಮಾರಿ ಹಾಕಿದ್ದಕ್ಕೆ ತೆಲಂಗಾಣ ಸಚಿವ ಕೆಟಿ ರಾಮರಾವ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಉತ್ತರ ನೀಡಲಾಗದ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಚಿವೆ ನಿರ್ಮಲಾ ಸೀತಾರಾಮನ್
ಉತ್ತರ ನೀಡಲಾಗದ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಚಿವೆ ನಿರ್ಮಲಾ ಸೀತಾರಾಮನ್

ಹೈದರಾಬಾದ್: ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡುವ ಅಕ್ಕಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಪಾಲು ಎಷ್ಟು ಎಂಬುದಕ್ಕೆ ಉತ್ತರ ನೀಡಲು ಸಾಧ್ಯವಾಗದ ಜಿಲ್ಲಾಧಿಕಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಛೀಮಾರಿ ಹಾಕಿದ್ದಕ್ಕೆ ತೆಲಂಗಾಣ ಸಚಿವ ಕೆಟಿ ರಾಮರಾವ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಕೆಟಿಆರ್ ಎಂದು ಜನಪ್ರಿಯವಾಗಿರುವ ರಾಮರಾವ್, ಉನ್ನತ ಹುದ್ದೆಗಳನ್ನು ಹೊಂದಿರುವ ಜನರ ಇಂತಹ ನಡವಳಿಕೆಯು 'ಕಠಿಣ ಪರಿಶ್ರಮಿ ಎಐಎಸ್ ಅಧಿಕಾರಿಗಳನ್ನು ನಿರಾಶೆಗೊಳಿಸುತ್ತದೆ' ಎಂದು ಹೇಳಿದರು.

ರಾಮರಾವ್ ಅವರು ಶುಕ್ರವಾರ ರಾತ್ರಿ ಟ್ವೀಟ್‌ ಮಾಡಿದ್ದು, 'ಇಂದು ಎಫ್‌ಎಂ ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾಧಿಕಾರಿ/ಕಾಮರೆಡ್ಡಿಯ ಕಲೆಕ್ಟರ್ ಅವರೊಂದಿಗೆ ನಡೆದುಕೊಂಡ ರೀತಿಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ' ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com