ಮುಂಬೈ: ರಸ್ತೆ ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನ
ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Published: 04th September 2022 05:30 PM | Last Updated: 04th September 2022 05:32 PM | A+A A-

ಸೈರಸ್ ಮಿಸ್ಟ್ರಿ
ಮುಂಬೈ: ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು, ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಭಾನುವಾರ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಸೂರ್ಯ ನದಿಯ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಾಲಕ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಗುಜರಾತ್‌ನ ಆಸ್ಪತ್ರೆಗೆ ರವಾನಿಸಲಾಗಿದೆ.
ರತನ್ ಟಾಟಾ ಅವರ ನಂತರ ಸಂಘಟಿತ ಅಧ್ಯಕ್ಷರಾಗಿ ಆಯ್ಕೆಯಾದ ಸೈರಸ್ ಮಿಸ್ತ್ರಿ ಅವರನ್ನು ಭಾರತದ ಅತ್ಯಂತ ಉನ್ನತ ಮಟ್ಟದ ಸಂಸ್ಥೆ ಟಾಟಾ ಸನ್ಸ್ ನಿಂದ 2016 ರಲ್ಲಿ ತೆರವುಗೊಳಿಸಲಾಗಿತ್ತು.
ಸೈರಸ್ ಮಿಸ್ತ್ರಿ ಅವರ ನಿಧನಕ್ಕೆ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ವಿನಾಶಕಾರಿ ಸುದ್ದಿ. ನನ್ನ ಸಹೋದರ ಸೈರಸ್ ಮಿಸ್ತ್ರಿ ನಿಧನರಾಗಿರುವುದನ್ನ ನಂಬಲು ಆಗುತ್ತಿಲ್ಲ. ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸುಪ್ರಿಯಾ ಸುಳೆ ಟ್ವೀಟ್ ಮಾಡಿದ್ದಾರೆ.
Devastating News My Brother Cyrus Mistry passed away. Can’t believe it.
— Supriya Sule (@supriya_sule) September 4, 2022
Rest in Peace Cyrus. pic.twitter.com/YEz7VDkWCY