ಸೈರಸ್ ಮಿಸ್ತ್ರಿ ಅಪಘಾತ ಪ್ರಕರಣದ ಬಗ್ಗೆ ತನಿಖೆ ಆದೇಶಿಸಿದ ಡಿಸಿಎಂ ಫಡ್ನವೀಸ್
ಟಾಟಾ ಸನ್ಸ್ ನ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನಿಖೆಗೆ ಆದೇಶಿಸಿದ್ದಾರೆ.
Published: 04th September 2022 07:29 PM | Last Updated: 04th September 2022 07:35 PM | A+A A-

ದೇವೇಂದ್ರ ಫಡ್ನವೀಸ್
ಮುಂಬೈ: ಟಾಟಾ ಸನ್ಸ್ ನ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತನಿಖೆಗೆ ಆದೇಶಿಸಿದ್ದಾರೆ.
ಪಾಲ್ಘರ್ ನಲ್ಲಿ ನಡೆದ ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವಿನ ಬಗ್ಗೆ ತಿಳಿದು ಅಘಾತ, ನೋವು ಉಂಟಾಗಿದೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಡಿಜಿಪಿ ಜೊತೆ ಮಾತನಾಡಿದ್ದು, ಪ್ರಕರಣದ ಬಗ್ಗೆ ವಿಸ್ತೃತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವರೂ ಆಗಿರುವ ಫಡ್ನವೀಸ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮುಂಬೈ: ರಸ್ತೆ ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನ
ಸೈರಸ್ ಮಿಸ್ತ್ರಿ ಕುಟುಂಬಕ್ಕೆ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿದ್ದಾರೆ. ಈ ನಡುವೆ ಪೊಲೀಸರು ಪ್ರಾಥಮಿಕ ವರದಿಗಳ ಆಧಾರದಲ್ಲಿ ಮಾಹಿತಿ ನೀಡಿದ್ದು, ಸೈರಸ್ ಮಿಸ್ತ್ರಿ ಇದ್ದ ಕಾರಿನ ಚಾಲಕ ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಎಂದು ಪಾಲ್ಘರ್ ಪೊಲೀಸರು ಹೇಳಿದ್ದಾರೆ. ಚಾಲಕ ಅತಿ ವೇಗವಾಗಿದ್ದರ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.