ಮೇಘಾಲಯ ಸರ್ಕಾರಕ್ಕೆ ಬಿಕ್ಕಟ್ಟು; ಬೆಂಬಲ ಮರುಪರಿಶೀಲಿಸಲಿರುವ ಬಿಜೆಪಿ?

ಮೇಘಾಲಯ ಸಿಎಂ ಕೊನ್ರಾಡ್ ಕೆ ಸಂಗ್ಮಾ ನೇತೃತ್ವದ ಪಕ್ಷದ ವಿರುದ್ಧ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರ ಬಿಕ್ಕಟ್ಟು ಎದುರಿಸುತ್ತಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷರೊಂದಿಗೆ ಮೇಘಾಲಯ ಸಿಎಂ
ಬಿಜೆಪಿ ರಾಷ್ಟ್ರಾಧ್ಯಕ್ಷರೊಂದಿಗೆ ಮೇಘಾಲಯ ಸಿಎಂ

ಇಂಫಾಲ: ಮೇಘಾಲಯ ಸಿಎಂ ಕೊನ್ರಾಡ್ ಕೆ ಸಂಗ್ಮಾ ನೇತೃತ್ವದ ಪಕ್ಷದ ವಿರುದ್ಧ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರ ಬಿಕ್ಕಟ್ಟು ಎದುರಿಸುತ್ತಿದೆ.

ಸಿಎಂ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದ ಭಾಗವಾಗಿರುವ ಬಿಜೆಪಿ ಬೆಂಬಲ ಮುಂದುವರೆಸಬೇಕೇ? ಎಂಬ ಚಿಂತನೆಯಲ್ಲಿ ತೊಡಗಿದೆ. ಬಿಜೆಪಿ ಬೆಂಬಲ ಹಿಂಪಡೆಯಬೇಕೆ? ಎಂಬ ಚಿಂತನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ. 

ಈ ಬಗ್ಗೆ ಬಿಜೆಪಿ ಮೇಘಾಲಯ ಉಸ್ತುವಾರಿ ಎಂ ಚುಬಾ ಆವೋ ಮಾತನಾಡಿ, ನ್ಯಾಷನಲ್ ಪೀಪಲ್ಸ್ ಪಾರ್ಟಿ ನೇತೃತ್ವದ ಮೇಘಾಲಯ ಡೆಮಾಕ್ರೆಟಿಕ್ ಮೈತ್ರಿ ಸರ್ಕಾರಕ್ಕೆ ನೀಡಲಾಗಿರುವ ಬೆಂಬಲವನ್ನು ಮುಂದುವರೆಸಬೇಕೇ? ಬೇಡವೇ? ಎಂಬ ಬಗ್ಗೆ ಇನ್ನೊಂದು ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
 
ಬೆಂಬಲ ಮುಂದುವರೆಸುವ ಬಗ್ಗೆ ಪಕ್ಷದ ವಲಯದಲ್ಲಿ ಚರ್ಚೆ ನಡೆಯುತ್ತಿದೆ, ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಂ ಚುಬಾ ಹೇಳಿದ್ದು, ಬಿಜೆಪಿಯ ಇಬ್ಬರು ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. 60 ಸದಸ್ಯರನ್ನು ಹೊಂದಿರುವ ಮೇಘಾಲಯ ವಿಧಾನಸಭೆಯಲ್ಲಿ ಎಂಡಿಎಗೆ 48 ಶಾಸಕರ ಬೆಂಬಲವಿದ್ದು, ಈ ಪೈಕಿ 23 ಶಾಸಕ ಎನ್ ಪಿಪಿಯವರಾಗಿದ್ದಾರೆ, ವಿಪಕ್ಷ ತೃಣಮೂಲ ಕಾಂಗ್ರೆಸ್ 12 ಶಾಸಕರನ್ನು ಹೊಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com