ಭ್ರಷ್ಟಾಚಾರ ಆರೋಪ: ದೆಹಲಿ ಲೆಫ್ಟಿನೆಂಟ್ ಗವರ್ನರ್ ರಿಂದ ಎಎಪಿ ನಾಯಕರಿಗೆ ಲೀಗಲ್ ನೋಟಿಸ್

ದೆಹಲಿಯ ಲೆಫ್ಟಿನೆಂಟ್-ಗವರ್ನರ್ ವಿಕೆ ಸಕ್ಸೇನಾ ಅವರು ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಆಮ್ ಆದ್ಮಿ ಪಕ್ಷದ ಐವರು ನಾಯಕರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಪಕ್ಷ ಮತ್ತು ಅದರ ಮುಖಂಡರಾದ ಅತಿಶಿ, ದುರ್ಗೇಶ್ ಪಾಠಕ್,...
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್-ಗವರ್ನರ್ ವಿಕೆ ಸಕ್ಸೇನಾ ಅವರು ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಆಮ್ ಆದ್ಮಿ ಪಕ್ಷದ ಐವರು ನಾಯಕರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಪಕ್ಷ ಮತ್ತು ಅದರ ಮುಖಂಡರಾದ ಅತಿಶಿ, ದುರ್ಗೇಶ್ ಪಾಠಕ್, ಸೌರಭ್ ಭಾರದ್ವಾಜ್, ಸಂಜಯ್ ಸಿಂಗ್ ಮತ್ತು ಜಾಸ್ಮಿನ್ ಶಾ ಅವರಿಗೆ ನೋಟಿಸ್ ನೀಡಲಾಗಿದೆ.

ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ಖಾದಿ ಗ್ರಾಮೋದ್ಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ವಿಕೆ ಸಕ್ಸೇನಾ ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂದು ಎಎಪಿ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಎಎಪಿ ನಾಯಕರಿಗೆ ಲೀಗಲ್ ನೋಟಿಸ್ ನೀಡಿದ್ದು, 48 ಗಂಟೆಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.

ಖಾದಿ ಗ್ರಾಮೋದ್ಯೋಗದ ಅಧ್ಯಕ್ಷರಾಗಿದ್ದ ವೇಳೆ 1,400 ಕೋಟಿ ರೂ. ಮೌಲ್ಯದ ನಿಷೇಧಿತ ಕರೆನ್ಸಿ ನೋಟುಗಳನ್ನು ಸಕ್ಸೇನಾ  ಬದಲಾಯಿಸಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಲೆಫ್ಟಿನೆಂಟ್ ಗವರ್ನರ್ ಮೇ ತಿಂಗಳಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅವರ ಮತ್ತು ಎಎಪಿ ನಡುವೆ ಗುದ್ದಾಟ ಶುರುವಾಯಿತು. ವಿಕೆ ಸಕ್ಸೇನಾ ಅವರು ಕೇಜ್ರಿವಾಲ್ ಅವರ ಸಿಂಗಾಪುರ್ ಭೇಟಿಗೆ ಅನುಮತಿ ನೀಡಲು ನಿರಾಕರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com