ಶಾಸಕರನ್ನು ಖರೀದಿಸಲು ಅಸ್ಸಾಂ ಸಿಎಂ ಯತ್ನ: ವಿಶ್ವಾಸಮತ ಗೆದ್ದು ಬಿಜೆಪಿ ವಿರುದ್ಧ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಆರೋಪ

ತನ್ನ ಆಳ್ವಿಕೆಯಿಲ್ಲದಿರುವ ಪ್ರಜಾಸತ್ತಾತ್ಮಕವಾಗಿ ಚುನಾಯಿತಗೊಂಡ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಆರೋಪಿಸಿದ್ದಾರೆ. ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸಿ ಗೆದ್ದ ನಂತರ ಮಾತನಾಡಿದರು.
ತಮ್ಮ ಶಾಸಕರೊಂದಿಗೆ ವಿಶ್ವಾಸಮತ ಯಾಚಿಸಲು ಬಂದ ಮುಖ್ಯಮಂತ್ರಿ ಹೇಮಂತ್ ಸೋರೆನ್
ತಮ್ಮ ಶಾಸಕರೊಂದಿಗೆ ವಿಶ್ವಾಸಮತ ಯಾಚಿಸಲು ಬಂದ ಮುಖ್ಯಮಂತ್ರಿ ಹೇಮಂತ್ ಸೋರೆನ್

ಛತ್ತೀಸ್ ಗಢ: ತನ್ನ ಆಳ್ವಿಕೆಯಿಲ್ಲದಿರುವ ಪ್ರಜಾಸತ್ತಾತ್ಮಕವಾಗಿ ಚುನಾಯಿತಗೊಂಡ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಆರೋಪಿಸಿದ್ದಾರೆ. ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸಿ ಗೆದ್ದ ನಂತರ ಮಾತನಾಡಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಜಾರ್ಖಂಡ್ ನ ಶಾಸಕರನ್ನು ಖರೀದಿಸಲು ಯತ್ನಿಸುತ್ತಿದ್ದಾರೆ ಎಂದು ಕೂಡ ಆರೋಪಿಸಿದರು. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಕೇಸರಿ ಪಕ್ಷವು ಪ್ರಯತ್ನಿಸುತ್ತಿದೆ. ಅಸ್ಸಾಂ ಸಿಎಂ ಜಾರ್ಖಂಡ್ ಶಾಸಕರನ್ನು ಖರೀದಿಸಲು ಪ್ರಯತ್ನಿಸಿದ್ದರು ಎಂದು ಸೊರೆನ್ ವಿಧಾನಸಭೆಯಲ್ಲಿ ಇಂದು ಆರೋಪಿಸಿದರು. ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆಯ ನಡುವೆ ಸದನದ ಬಾವಿಗೆ ನುಗ್ಗಿ ಘೋಷಣೆಗಳನ್ನು ಕೂಗಿದರು.

ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಗಲಭೆಗಳನ್ನು ಪ್ರಚೋದಿಸುವ ಮೂಲಕ ದೇಶದಲ್ಲಿ ಅಂತರ್ಯುದ್ಧದಂತಹ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ.ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಮಂತ ಬಿಸ್ವಾ ಶರ್ಮಾ ಜಾರ್ಖಂಡ್ ಶಾಸಕರ ಖರೀದಿಯಲ್ಲಿ ತೊಡಗಿದ್ದಾರೆ. ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಗಲಭೆಗಳನ್ನು ಉತ್ತೇಜಿಸುವ ಮೂಲಕ ದೇಶದಲ್ಲಿ 'ಅಂತರ್ಯುದ್ಧ'ದಂತಹ ಪರಿಸ್ಥಿತಿಯನ್ನು ತರಲು ಪ್ರಯತ್ನಿಸುತ್ತಿದೆ ಎಂದು ಕೇಸರಿ ಪಕ್ಷದ ವಿರುದ್ಧ ಸೋರೆನ್ ವಾಗ್ದಾಳಿ ನಡೆಸಿದರು.

ವಿರೋಧ ಪಕ್ಷ ಪ್ರಜಾಪ್ರಭುತ್ವವನ್ನು ನಾಶ ಮಾಡಿದೆ. ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದೆ. ಸದನದಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಸೊರೆನ್ ವಿಧಾನಸಭೆಯಲ್ಲಿ ಹೇಳಿದರು. ಜನರು ಮಾರುಕಟ್ಟೆಯಲ್ಲಿ ಸರಕುಗಳನ್ನು ಖರೀದಿಸುವಂತೆ ಬಿಜೆಪಿ ಶಾಸಕರನ್ನು ಖರೀದಿಸುತ್ತದೆ ಎಂದು ಅವರು ಆರೋಪಿಸಿದರು.

ಲಾಭಕ್ಕಾಗಿ ಹುದ್ದೆ ಪ್ರಕರಣದಲ್ಲಿ ಸೊರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿದ ಮನವಿಯ ನಂತರ ಸೋರೆನ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವ ಬಗ್ಗೆ ಅನಿಶ್ಚಿತತೆ ಎದುರಿಸಿದ್ದರು. ಚುನಾವಣಾ ಆಯೋಗವು ಆಗಸ್ಟ್ 25 ರಂದು ರಾಜ್ಯಪಾಲ ರಮೇಶ್ ಬೈಸ್ ಅವರಿಗೆ ಈ ಸಂಬಂಧ ತನ್ನ ಅಭಿಪ್ರಾಯವನ್ನು ತಿಳಿಸಿದ್ದರಿಂದ ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಉಂಟಾಗಿತ್ತು. 

ಚುನಾವಣಾ ಆಯೋಗದ ನಿರ್ಧಾರ ಇನ್ನೂ ಅಧಿಕೃತವಾಗದಿದ್ದರೂ, ಚುನಾವಣಾ ಸಮಿತಿಯು ಸಿಎಂ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಶಿಫಾರಸು ಮಾಡಿದೆ ಎಂಬ ಗುಸುಗುಸು ಇದೆ.

ವಿಧಾನಸಭೆಯ ಸೆಕ್ರೆಟರಿಯೇಟ್‌ನಿಂದ ಶಾಸಕರಿಗೆ ಕಳುಹಿಸಲಾದ ಪತ್ರದ ಪ್ರಕಾರ, ಸೋರೆನ್ ಅವರು ತಮ್ಮ ಬಹುಮತವನ್ನು ಸಾಬೀತುಪಡಿಸಲು ವಿಶ್ವಾಸಮತ ಯಾಚನೆಯನ್ನು ಮಂಡಿಸಲು ಇಚ್ಛೆ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com