ಗುಣಮಟ್ಟದ, ಉಚಿತ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ: ದೆಹಲಿ ಸಿಎಂ ಕೇಜ್ರಿವಾಲ್

ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಮತ್ತು ಉಚಿತ ಶಿಕ್ಷಣ ನೀಡುವುದು ಪ್ರತಿ ಸರ್ಕಾರದ ಕರ್ತವ್ಯವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ - ಸ್ಟಾಲಿನ್
ಅರವಿಂದ್ ಕೇಜ್ರಿವಾಲ್ - ಸ್ಟಾಲಿನ್

ಚೆನ್ನೈ: ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಮತ್ತು ಉಚಿತ ಶಿಕ್ಷಣ ನೀಡುವುದು ಪ್ರತಿ ಸರ್ಕಾರದ ಕರ್ತವ್ಯವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ 26 ಉತ್ಕೃಷ್ಟ ಶಾಲೆಗಳು ಮತ್ತು 15 ಮಾದರಿ ಶಾಲೆಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ದೆಹಲಿ ಸಿಎಂ, ಶಿಕ್ಷಣ ಕ್ಷೇತ್ರದಲ್ಲಿ ಡಿಎಂಕೆ ಸರ್ಕಾರ ಕೈಗೊಂಡಿರುವ ಉಪಕ್ರಮಗಳನ್ನು ಶ್ಲಾಘಿಸಿದರು. ದೇಶದಲ್ಲಿ ಸುಮಾರು ಶೇ. 66 ರಷ್ಟು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದು, ಈ ಶಾಲೆಗಳ ಗುಣಮಟ್ಟವನ್ನು ಸುಧಾರಿಸುವ ಕೆಲಸ ಮಾಡುವ ತುರ್ತು ಅಗತ್ಯವಿದೆ ಎಂದು ಒತ್ತಿ ಹೇಳಿದರು.

"ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕೆಂದು ನಾವೆಲ್ಲರೂ ಬಯಸುತ್ತೇವೆ. ಆದರೆ ನಾವು ನಮ್ಮ ವಿದ್ಯಾರ್ಥಿಗಳಿಗೆ ಕೊಳೆತ ಶಿಕ್ಷಣವನ್ನು ನೀಡಿದರೆ ದೇಶ ಅಭಿವೃದ್ಧಿ ಹೊಂದಲು ಹೇಗೆ ಸಾಧ್ಯ" ಎಂದು ಕೇಜ್ರಿವಾಲ್ ಪ್ರಶ್ನಿಸಿದರು.

ಇದೇ ವೇಳೆ ತಮಿಳುನಾಡು ಸಿಎಂ ಸ್ಟಾಲಿನ್ ಅವರು ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವುದಕ್ಕಾಗಿ ಶಿಕ್ಷಕರ ದಿನದಂದು ಪುದುಮೈ ಪೆನ್ ಯೋಜನೆ ಚಾಲನೆ ನೀಡಿದರು. ಈ ಯೋಜನೆಯಡಿ ರಾಜ್ಯ ಸರ್ಕಾರಿ ಶಾಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಮಾಸಿಕ 1000 ರೂ. ನೀಡಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com