ನೇತಾಜಿ ಪ್ರತಿಮೆ ಅನಾವರಣಕ್ಕೆ ಪುತ್ರಿ ಗೈರು ಸಾಧ್ಯತೆ, ಆದರೆ ಬೋಸ್ ಅಸ್ಥಿಯನ್ನು ಭಾರತಕ್ಕೆ ತನ್ನಿ ಎಂದ ಅನಿತಾ ಬೋಸ್

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ಅನಾವರಣಗೊಳಿಸುತ್ತಿದ್ದು, ನೇತಾಜಿ ಅವರ ಪುತ್ರಿ ಅನಿತಾ ಬೋಸ್ ಅವರು ಈ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳುವ...
ನೇತಾಜಿ ಪ್ರತಿಮೆ
ನೇತಾಜಿ ಪ್ರತಿಮೆ

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ಅನಾವರಣಗೊಳಿಸುತ್ತಿದ್ದು, ನೇತಾಜಿ ಅವರ ಪುತ್ರಿ ಅನಿತಾ ಬೋಸ್ ಅವರು ಈ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ತಮ್ಮ ತಂದೆ ಸುಭಾಷ್ ಚಂದ್ರ ಬೋಸ್ ಅವರ ಅಸ್ಥಿಯನ್ನು ಭಾರತಕ್ಕೆ ಮರಳಿ ತರಲು ಇರುವ "ಷರತ್ತುಗಳು ಮತ್ತು ಕಾರ್ಯವಿಧಾನಗಳ" ಕುರಿತು ಚರ್ಚಿಸಲು ಪ್ರಧಾನಿ ಮೋದಿಯನ್ನು ಭೇಟಿ ಮಾಡಲು ಬಯಸಿದ್ದಾರೆ.

ಈಗ ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಇರಿಸಲಾಗಿರುವ ನೇತಾಜಿ ಅವರ ಅವಶೇಷಗಳನ್ನು ಗೌರವಯುತವಾಗಿ ಮರಳಿ ಭಾರತಕ್ಕೆ ತರಬೇಕು ಎಂದು ಸುಮಾರು 80 ವರ್ಷ ವಯಸ್ಸಿನ ಅನಿತಾ ಬೋಸ್ ಪ್ಫಾಫ್ ಅವರು ಪಿಟಿಐಗೆ ತಿಳಿಸಿದ್ದಾರೆ.

"ನನ್ನ ತಂದೆಯ ಅವಶೇಷಗಳನ್ನು ಹಿಂದಿರುಗಿಸುವ ಷರತ್ತುಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ನಾನು ಪ್ರಧಾನಿ ಅವರೊಂದಿಗೆ ಚರ್ಚಿಸಲು ಬಯಸುತ್ತೇನೆ" ಎಂದು ವೃತ್ತಿಯಲ್ಲಿ ಅರ್ಥಶಾಸ್ತ್ರಜ್ಞರಾದ ಅನಿತಾ ಬೋಸ್ ಅವರು ದೂರವಾಣಿ ಮೂಲಕ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ನೇತಾಜಿ ಅವರ ಪ್ರತಿಮೆಯ ಅನಾವರಣ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿದ್ದರೂ, ಕಡಿಮೆ ಸಮಯದಿಂದಾಗಿ ತಾನು ವಾಸಿಸುವ ಜರ್ಮನಿಯಿಂದ ದೆಹಲಿಗೆ ಪ್ರಯಾಣ ಕೈಗೊಳ್ಳಲು ಕಷ್ಟವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾತಂತ್ರ್ಯ ಚಳುವಳಿಗೆ ನೀಡಿದ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್ ನಲ್ಲಿ ಭವ್ಯ ಮೇಲಾವರಣದ ಅಡಿಯಲ್ಲಿ ಸ್ಥಾಪನೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com