ಸರಿಯಾಗಿ ನಿದ್ರೆ ಬರ್ತಿಲ್ಲವೆಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಸರಿಯಾಗಿ ನಿದ್ರಿಸಲು ಆಗ್ತಿಲ್ಲ ಎಂಬ ಕಾರಣಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಮಾರು 19 ವರ್ಷ ವಯಸ್ಸಿನ ನರ್ಸಿಂಗ್ ವಿದ್ಯಾರ್ಥಿನಿ ಭುವನೇಶ್ವರದ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭುವನೇಶ್ವರ: ಸರಿಯಾಗಿ ನಿದ್ರಿಸಲು ಆಗ್ತಿಲ್ಲ ಎಂಬ ಕಾರಣಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಮಾರು 19 ವರ್ಷ ವಯಸ್ಸಿನ ನರ್ಸಿಂಗ್ ವಿದ್ಯಾರ್ಥಿನಿ ಭುವನೇಶ್ವರದ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೋಲಂಗಿರ್ ಜಿಲ್ಲೆಯ ಮೂಲದ ವಿದ್ಯಾರ್ಥಿನಿ ಶವ ಭಾನುವಾರ ರಾತ್ರಿ ಏರ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಜಮುಕೋಲಿಯಲ್ಲಿರುವ ಖಾಸಗಿ ಹಾಸ್ಟೆಲ್‌ನಲ್ಲಿ ತನ್ನ ಕೋಣೆಯ ಸೀಲಿಂಗ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳದಲ್ಲಿ ಆತ್ಮಹತ್ಯೆ ಪತ್ರವೊಂದು ಪತ್ತೆಯಾಗಿದ್ದು, ಕಳೆದ ಕೆಲವು ದಿನಗಳಿಂದ ಸರಿಯಾಗಿ ನಿದ್ದೆ ಬರದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ತನ್ನ ಸಾವಿಗೆ ಯಾರನ್ನೂ ದೂರಿಲ್ಲ. ಸಾವಿನ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ತನ್ನ ಕುಟುಂಬ ಮತ್ತು ಸ್ನೇಹಿತರಲ್ಲಿ ಕ್ಷಮೆಯಾಚಿಸಿದ್ದಾಳೆ. ಫೋರೆನ್ಸಿಕ್ ಮತ್ತು ಕೈಬರಹ ತಜ್ಞರು  ಪತ್ರವನ್ನು ಆಕೆಯೋ ಬರೆದಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ.

ಈ ಸಂಬಂಧ ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿದ್ದೇವೆ. ಸದ್ಯಕ್ಕೆ ಯಾರ ವಿರುದ್ಧವೂ ಯಾವುದೇ ಆರೋಪ ಮಾಡಲಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಏರ್‌ಫೀಲ್ಡ್ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com