ಹಿಜಾಬ್ ಕುರಿತ ಅರ್ಜಿ ವಿಚಾರಣೆ: ಸೆಪ್ಟೆಂಬರ್ 7ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಮುಂದೂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಮುಂದೂಡಿದೆ.ಬುಧವಾರ ಈ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ಎತ್ತಿಹಿಡಿಯುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ  ಆಗಸ್ಟ್ 29 ರಂದುನೋಟಿಸ್ ನೀಡಿತು. ಈ ವಿಚಾರವನ್ನು ಮುಂದೂಡುವ ಮನವಿಗಳನ್ನು ನಾವು ಸ್ವೀಕರಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ  ಸ್ಪಷ್ಟಪಡಿಸಿತು ಮತ್ತು ನಾವು ಈ ರೀತಿಯ 'ಫೋರಂ ಶಾಪಿಂಗ್‌' ಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5 ರಂದು ನಡೆಸುವುದಾಗಿ ನ್ಯಾಯಾಲಯ ಹೇಳಿತ್ತು. ಇಂದು ಮತ್ತೆ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ಶಾಲಾ-ಕಾಲೇಜುಗಳ ಏಕರೂಪದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಸರ್ಕಾರದ ಮಲತಾಯಿ ವರ್ತನೆಯು ವಿದ್ಯಾರ್ಥಿಗಳ ನಂಬಿಕೆಯನ್ನು ಅಭ್ಯಾಸ ಮಾಡುವುದನ್ನು ತಡೆಯುತ್ತದೆ ಮತ್ತು ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗುತ್ತದೆ ಎಂದು ಅರ್ಜಿಯೊಂದರಲ್ಲಿ ಆರೋಪಿಸಲಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com