ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಹಾಕುವುದು ಕಡ್ಡಾಯ: ನಿತಿನ್ ಗಡ್ಕರಿ

ಕಾರಿನ ಸೀಟ್ ಬೆಲ್ಟ್‌ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಮಂಗಳವಾರ ಹೇಳಿದ್ದಾರೆ.
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ

ನವದೆಹಲಿ: ಕಾರಿನ ಸೀಟ್ ಬೆಲ್ಟ್‌ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಮಂಗಳವಾರ ಹೇಳಿದ್ದಾರೆ.

ಕಾರ್ಯಕ್ರಮವೊಂದರ ವಿಡಿಯೋವನ್ನು ಹಂಚಿಕೊಂಡ ಕೇಂದ್ರ ಸಚಿವರು, ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. "ಕಾರಿನಲ್ಲಿ ಕುಳಿತುಕೊಳ್ಳುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದನ್ನು ಈಗ ಕಡ್ಡಾಯಗೊಳಿಸಲಾಗುವುದು" ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ.

ಮುಂಭಾಗದ ಸೀಟ್‌ಗಳ ಜೊತೆಗೆ ಹಿಂಭಾಗದ ಸೀಟುಗಳಲ್ಲಿ ಕುಳಿತಿರುವವರು ಸೀಟ್ ಬೆಲ್ಟ್ ಹಾಕದಿದ್ದರೆ ಸುರಕ್ಷತಾ ಬೀಪ್‌ ಬರುತ್ತದೆ ಎಂಬುದನ್ನು ವೀಡಿಯೋದಲ್ಲಿ ಹೈಲೈಟ್ ಮಾಡಿದ್ದಾರೆ.

ಖ್ಯಾತ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭಾನುವಾರ ಸಂಜೆ ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಕಾರಿನ ಹಿಂಭಾಗದಲ್ಲಿ ಕುಳಿತಿದ್ದ ಸೈರ್ ಮಿಸ್ತ್ರಿ ಅವರು ಸೀಟ್ ಬೆಲ್ಟ್ ಧರಿಸಿರಲಿಲ್ಲ ಎಂಬ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಈ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com