ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಶೀಘ್ರ ಬಿಡುಗಡೆಗೆ ಕೇಂದ್ರ ಅನುಮೋದನೆ ನೀಡಿತ್ತು; ಸುಪ್ರೀಂ ವಿಚಾರಣೆಗೂ ಮುನ್ನ ವಕೀಲ

2022 ರ ಗಲಭೆಯ ಸಂತ್ರಸ್ತೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಕುಟುಂಬ ಸದಸ್ಯರ ಹತ್ಯೆ ಪ್ರಕರಣದ ಅಪರಾಧಿಗಳ ಶೀಘ್ರ ಬಿಡುಗಡೆಗೆ ನಿಯಮಗಳ ಪ್ರಕಾರ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಸ್ವಾಗತಿಸುತ್ತಿರುವುದು
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಸ್ವಾಗತಿಸುತ್ತಿರುವುದು

ಅಹ್ಮದಾಬಾದ್: 2022 ರ ಗಲಭೆಯ ಸಂತ್ರಸ್ತೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಕುಟುಂಬ ಸದಸ್ಯರ ಹತ್ಯೆ ಪ್ರಕರಣದ ಅಪರಾಧಿಗಳ ಶೀಘ್ರ ಬಿಡುಗಡೆಗೆ ನಿಯಮಗಳ ಪ್ರಕಾರ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು ಎಂದು ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ರಿಷಿ ಮಲ್ಹೋತ್ರ ಹೇಳಿದ್ದಾರೆ.

ಬಿಲ್ಕಿಸ್ ಬಾನು ಗ್ಯಾಂಗ್ ರೇಪ್ ಆರೋಪಿಗಳನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಬಿಡುಗಡೆಗೊಂಡ ಅಪರಾಧಿಗಳ ಪರ ರಿಷಿ ಮಲ್ಹೋತ್ರ ವಾದ ಮಂಡಿಸಲಿದ್ದಾರೆ.  ಮೊಜೊ ಸ್ಟೋರಿಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, 15 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರದ ನೀತಿಯ (ರೆಮಿಷನ್ ನೀತಿ) ಅನುಗುಣವಾಗಿ ಕೇಂದ್ರ ಸರ್ಕಾರ ತನ್ನ ಅನುಮೋದನೆ ನೀಡಿತ್ತು ಎಂದು ಹೇಳಿದ್ದಾರೆ.

ವಿಚಾರಣಾಧೀನ ನ್ಯಾಯಾಲಯದಲ್ಲಿ ಎಲ್ಲಾ 11 ಅಪರಾಧಿಗಳಿಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿತ್ತು.  ಚರ್ಚೆಯಲ್ಲಿ "ಅಪರಾಧಿಗಳ ಬಿಡುಗಡೆಗೆ ಕೇಂದ್ರದ ಅನುಮೋದನೆ ಇತ್ತೇ? ಎಂಬ ಪ್ರಶ್ನೆಗೆ ಉತ್ತರಿಸಿರುವ ಮಲ್ಹೋತ್ರಾ, ಖಂಡಿತವಾಗಿಯೂ ಇತ್ತು. ಸಿಆರ್ ಪಿಸಿ ಸೆಕ್ಷನ್ 435 ರ ಅಡಿಯಲ್ಲಿ ಅನುಮೋದನೆ ಪಡೆಯಲಾಗಿದೆ. ನನ್ನ ಈ ಹೇಳಿಕೆಯನ್ನು ದಾಖಲಿಸಿಟ್ಟುಕೊಳ್ಳಿ, ಸಂಪೂರ್ಣ ಜವಾಬ್ದಾರಿಯಿಂದ ಈ ಹೇಳಿಕೆ ನೀಡುತ್ತಿದ್ದೇನೆ" ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com