'ದ್ವೇಷದ ರಾಜಕಾರಣಕ್ಕೆ ತಂದೆಯನ್ನು ಕಳೆದುಕೊಂಡೆ ಆದರೆ ದೇಶವನ್ನು ಕಳೆದುಕೊಳ್ಳುವುದಿಲ್ಲ': ರಾಹುಲ್ ಗಾಂಧಿ
ರಾಜಕೀಯ ದ್ವೇಷಕ್ಕಾಗಿ ತಂದೆಯವರಾದ ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರನ್ನು ಕಳೆದುಕೊಂಡೆ ಆದರೆ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ಸಿದ್ಧನಿಲ್ಲ ಎಂದು ಸಂಸದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
Published: 07th September 2022 11:51 AM | Last Updated: 07th September 2022 01:52 PM | A+A A-

ಶ್ರೀಪೆರಂಬದೂರಿನಲ್ಲಿ ತಂದೆ ರಾಜೀವ್ ಗಾಂಧಿ ಸ್ಮಾರಕಕ್ಕೆ ನಮಿಸಿದ ಪುತ್ರ ರಾಹುಲ್ ಗಾಂಧಿ
ನವದೆಹಲಿ: ರಾಜಕೀಯ ದ್ವೇಷಕ್ಕಾಗಿ ತಂದೆಯವರಾದ ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರನ್ನು ಕಳೆದುಕೊಂಡೆ ಆದರೆ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ಸಿದ್ಧನಿಲ್ಲ ಎಂದು ಸಂಸದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ತಮಿಳು ನಾಡಿನ ಕನ್ಯಾಕುಮಾರಿಯಲ್ಲಿ ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) ಆರಂಭಿಸುವುದಕ್ಕೆ ಮುನ್ನ ಶ್ರೀಪೆರಂಬದೂರಿನಲ್ಲಿರುವ ರಾಜೀವ್ ಗಾಂಧಿ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿ ಟ್ವೀಟ್ ಮಾಡಿರುವ ಅವರು, ನಾನು ನನ್ನ ತಂದೆಯನ್ನು ರಾಜಕೀಯ ದ್ವೇಷ ಮತ್ತು ವಿಭಜನೆಗಾಗಿ ಕಳೆದುಕೊಂಡೆ. ಹಾಗೆಂದು ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ಸಿದ್ಧನಿಲ್ಲ. ಪ್ರೀತಿ ದ್ವೇಷವನ್ನು ಗೆಲ್ಲುತ್ತದೆ. ಆಶಾವಾದ ಭಯವನ್ನು ಸೋಲಿಸುತ್ತದೆ. ನಾವೆಲ್ಲರೂ ಒಟ್ಟಾಗಿ ಜಯಸೋಣ, ಎಲ್ಲ ಸಮಸ್ಯೆಗಳಿಂದ ಹೊರಬರೋಣ ಎಂದು ತಮ್ಮ ತಂದೆಗೆ ನಮನ ಸಲ್ಲಿಸಿದ ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ.
LIVE: Shri Rajiv Gandhi Memorial | Sriperumbudur | Tamil Nadu https://t.co/HSzsAXJQHL
— Rahul Gandhi (@RahulGandhi) September 7, 2022
ಎಲ್ ಟಿಟಿಇ ಉಗ್ರರಿಂದ 1991ರ ಮೇ 21ರಂದು ತಮಿಳು ನಾಡಿನ ಪೆರಂಬದೂರಿನಲ್ಲಿ ರಾಜೀವ್ ಗಾಂಧಿ ಆತ್ಮಹತ್ಯಾ ದಾಳಿಗೆ ಬಲಿಯಾದರು.
ತಮ್ಮ ತಂದೆಯ ಸ್ಮಾರಕಕ್ಕೆ ಭೇಟಿ ನೀಡಿದ ನಂತರ, ರಾಹುಲ್ ಗಾಂಧಿಯವರು ಕನ್ಯಾಕುಮಾರಿಯ ಮಹಾತ್ಮ ಗಾಂಧಿ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು, ಅಲ್ಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಯಾತ್ರೆಯ ಪ್ರಾರಂಭವಾಗಿ ರಾಷ್ಟ್ರಧ್ವಜವನ್ನು ಹಸ್ತಾಂತರಿಸಲಿದ್ದಾರೆ.
ಇದು ದೇಶದಲ್ಲಿ ಇದುವರೆಗೆ ಆಯೋಜಿಸಲಾದ "ದೀರ್ಘ ರಾಜಕೀಯ ಯಾತ್ರೆ" ಎಂದು ಕಾಂಗ್ರೆಸ್ ಹೇಳಿದೆ. ಇಂದು ಸಂಜೆ 5 ಗಂಟೆಗೆ ನಡೆಯುವ ಸಮಾರಂಭದಲ್ಲಿ ಯಾತ್ರೆಗೆ ಚಾಲನೆ ನೀಡಲಿದ್ದು, ಕನ್ಯಾಕುಮಾರಿಯಲ್ಲಿ ಸಂಜೆ 4:30 ಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ರಾಜಸ್ಥಾನದ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢದ ಭೂಪೇಶ್ ಬಘೇಲ್ ಉಪಸ್ಥಿತರಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬೆಳಗ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,500 ಕಿ.ಮೀ ಪಾದಯಾತ್ರೆ ಆರಂಭವಾಗಲಿದೆ. ರಾಹುಲ್ ಗಾಂಧಿ ಸೇರಿದಂತೆ 119 ಯಾತ್ರಿಗಳು' ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತನ್ನ 'ಭಾರತ್ ಜೋಡೋ ಯಾತ್ರೆ'ಯನ್ನು ಪ್ರಾರಂಭಿಸುವ ಮೊದಲು, ಇದು ಭಾರತೀಯ ರಾಜಕೀಯದಲ್ಲಿ ಒಂದು ಮಹತ್ವದ ತಿರುವು ಮತ್ತು ಹೊಸ ಆರಂಭವನ್ನು ಸೂಚಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಇದನ್ನೂ ಓದಿ: 'ಭಾರತ್ ಜೋಡೋ' ಯಾತ್ರೆ: ತಮಿಳು ನಾಡಿನ ಶ್ರೀಪೆರಂಬದೂರಿನಲ್ಲಿ ತಂದೆ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ
ಸ್ಟಾಲಿನ್ ಅವರು ಖಾದಿಯಿಂದ ಮಾಡಿದ ರಾಷ್ಟ್ರಧ್ವಜವನ್ನು ರಾಹುಲ್ ಗಾಂಧಿಯವರಿಗೆ ಅರ್ಪಿಸಲಿದ್ದು, ಅವರು ಅದನ್ನು ಯಾತ್ರೆಯ ಉದ್ದಕ್ಕೂ ನಿರ್ವಹಿಸುವ ಸೇವಾದಳದ ಕಾರ್ಯಕರ್ತರಿಗೆ ಹಸ್ತಾಂತರಿಸಲಿದ್ದಾರೆ. ಸೆಪ್ಟೆಂಬರ್ 7 2022 ಭಾರತದ ಅತ್ಯಂತ ಹಳೆಯ ರಾಜಕೀಯ ಪಕ್ಷವು ಇದುವರೆಗೆ ಕೈಗೊಂಡಿರುವ ಸುದೀರ್ಘವಾದ ಪಾದಯಾತ್ರೆಯನ್ನು ಪ್ರಾರಂಭಿಸುವ ದಿನ. ಇದು ದುಃಖಕರ ದಿನ, ಶಾಂತ ಪ್ರತಿಬಿಂಬ ಮತ್ತು ಹೊಸ ಸಂಕಲ್ಪ ದಿನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.