ನೀಟ್, ಜೆಇಇ ಅನ್ನು ಸಿಯುಇಟಿ ಜತೆ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಕೇಂದ್ರ ಸಚಿವ ಪ್ರಧಾನ್

ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ(ಸಿಯುಇಟಿ) ಯೊಂದಿಗೆ ವಿಲೀನಗೊಳಿಸುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಶಿಕ್ಷಣ, ಕೌಶಲ್ಯ ಅಭಿವೃದ್ಧಿ...
ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್

ಕೋಟಾ: ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ(ಸಿಯುಇಟಿ) ಯೊಂದಿಗೆ ವಿಲೀನಗೊಳಿಸುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬುಧವಾರ ಹೇಳಿದ್ದಾರೆ.

ವಿಶ್ವವಿದ್ಯಾನಿಲಯ ಅನುದಾನ ಆಯೋಗದ ಅಧ್ಯಕ್ಷ ಜಗದೇಶ್ ಕುಮಾರ್ ಅವರು ಕಳೆದ ತಿಂಗಳು ಭವಿಷ್ಯದಲ್ಲಿ ಜೆಇಇ ಮತ್ತು ನೀಟ್ ಅನ್ನು ಸಿಯುಇಟಿಯೊಂದಿಗೆ ವಿಲೀನಗೊಳಿಸಲಾಗುವುದು ಎಂದು ಹೇಳಿದ್ದರು.

"NEET, JEE ಮತ್ತು CUET ವಿಲೀನವು ಪ್ರಸ್ತುತ ಒಂದು ಪರಿಕಲ್ಪನೆ, ಚಿಂತನೆಯಾಗಿದೆ ಅಷ್ಟೆ ಮತ್ತು ಸರ್ಕಾರ ತಾತ್ವಿಕವಾಗಿ ಅದನ್ನು ಇನ್ನೂ ನಿರ್ಧರಿಸಿಲ್ಲ" ಎಂದು ಪ್ರಧಾನ್ ತಿಳಿಸಿದ್ದಾರೆ.

ತಮ್ಮ ತವರು ರಾಜ್ಯ ಒಡಿಶಾದ ಇಲ್ಲಿಯ ಅಲೆನ್ ಕರಿಯರ್ ಇನ್ಸ್ಟಿಟ್ಯೂಟ್‌ನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಕೇಂದ್ರ ಸಚಿವರು, ಮುಂದಿನ ಎರಡು ವರ್ಷಗಳ ಕಾಲ NEET, JEE ಅನ್ನು CUET ನೊಂದಿಗೆ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಮೂರು ಪರೀಕ್ಷೆಗಳ ವಿಲೀನದ ಪರಿಕಲ್ಪನೆಯನ್ನು ನಿರ್ಧರಿಸಲು ಮತ್ತು ಸಂಯೋಜಿತ ಪರೀಕ್ಷೆಯನ್ನು ನಡೆಸಲು ಕನಿಷ್ಠ ಎರಡು ವರ್ಷಗಳು ಬೇಕಾಗುತ್ತದೆ. ಹೀಗಾಗಿ ಯಾರೂ ಭಯಪಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪ್ರಧಾನ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com