ಮೇಲ್ಮೈ ನಿಂದ ಆಗಸಕ್ಕೆ ಚಿಮ್ಮುವ QRSAM ಕ್ಷಿಪಣಿ ವ್ಯವಸ್ಥೆ ಪರೀಕ್ಷೆ ಯಶಸ್ವಿ

ಮೇಲ್ಮೈನಿಂದ ಆಗಸಕ್ಕೆ ಚಿಮ್ಮುವ ತ್ವರಿತ ಪ್ರತಿಕ್ರಿಯೆಯ ಕ್ಷಿಪಣಿ ವ್ಯವಸ್ಥೆಯನ್ನು ಭಾರತ ಯಶಸ್ವಿಯಾಗಿ ಉಡಾಯಿಸಿದೆ.
ಕ್ಷಿಪಣಿ ಉಡಾವಣೆ (ಸಂಗ್ರಹ ಚಿತ್ರ)
ಕ್ಷಿಪಣಿ ಉಡಾವಣೆ (ಸಂಗ್ರಹ ಚಿತ್ರ)

ಒಡಿಶಾ: ಮೇಲ್ಮೈನಿಂದ ಆಗಸಕ್ಕೆ ಚಿಮ್ಮುವ ತ್ವರಿತ ಪ್ರತಿಕ್ರಿಯೆಯ ಕ್ಷಿಪಣಿ ವ್ಯವಸ್ಥೆ (QRSAM)ಯನ್ನು ಭಾರತ ಯಶಸ್ವಿಯಾಗಿ ಉಡಾಯಿಸಿದೆ. 

ಒಡಿಶಾದ ಕಡಲ ತೀರದಿಂದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನಲ್ಲಿ ಉಡಾವಣೆ ಮಾಡಲಾಗಿದ್ದು, ಸೇನೆ ಹಾಗೂ ಡಿಆರ್ ಡಿಒ ಮೌಲ್ಯಮಾಪನ ಪ್ರಯೋಗಗಳ ಭಾಗವಾಗಿ ಈ ಪ್ರಯೋಗ ನಡೆದಿದೆ.

ಗರಿಷ್ಠ ಮಟ್ಟದ ವೇಗದ ವೈಮಾನಿಕ ಟಾರ್ಗೆಟ್ ಗಳ ವಿರುದ್ಧ ಈ ಪ್ರಯೋಗ ನಡೆಸಲಾಗಿದ್ದು, ಹಲವು ವಿಧದ ಅಪಾಯಗಳನ್ನು ಕೃತಕವಾಗಿ ಸೃಷ್ಟಿಸಿ ಕ್ಷಿಪಣಿ ವ್ಯವಸ್ಥೆಯನ್ನು ಪರೀಕ್ಷಾರ್ಥ ಪ್ರಯೋಗ ನಡೆಸಲಾಗಿದೆ. ಕ್ಷಿಪಣಿ ವ್ಯವಸ್ಥೆ ನಿರೀಕ್ಷಿತ ಫಲಿತಾಂಶವನ್ನು ನೀಡಿದೆ ಎಂದು ಡಿಆರ್ ಡಿಒ ಹೇಳಿದೆ. 

ಸರ್ಚ್-ಟ್ರ್ಯಾಕ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು  ಈ QRSAM ಶಸ್ತ್ರಾಸ್ತ್ರ ವ್ಯವಸ್ಥೆಯ ವೈಶಿಷ್ಟ್ಯವಾಗಿದೆ ಎಂದು ಡಿಆರ್ ಡಿಒ ಹೇಳಿದೆ. ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್ ಡಿಒಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com