ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ..! ರಾಹುಲ್ ಗಾಂಧಿ ಹೇಳಿದ್ದೇನು?

ಮತ್ತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಕುರಿತು ರಾಹುಲ್ ಗಾಂಧಿ ಮಹತ್ವದ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಮತ್ತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಕುರಿತು ರಾಹುಲ್ ಗಾಂಧಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿರುವಂತೆಯೇ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ತಾವು ತಮ್ಮ ನಿರ್ಧಾರವನ್ನು ತೆಗೆದುಕೊಂಡಿದ್ದು, ಚುನಾವಣೆ ನಡೆದಾಗ ಎಲ್ಲವೂ ತಿಳಿಯಲಿದೆ ಎಂದು ಹೇಳಿದ್ದಾರೆ.

'ಪಕ್ಷದ ಮುಂದಿನ ಅಧ್ಯಕ್ಷರಾಗುವ ಬಗ್ಗೆ ತಮ್ಮ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದು, ಚುನಾವಣೆ ನಡೆದಾಗ ಮಾತ್ರ ಉತ್ತರಿಸುತ್ತೇನೆ' ಎಂದು ಹೇಳಿದ್ದಾರೆ.

2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುವಿರೇ ಎಂಬ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ನಾನು ನನ್ನ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ; ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದು, ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆದಾಗ ನಾನು ಉತ್ತರಿಸುತ್ತೇನೆ ಎಂದರು.

"ಪಕ್ಷದ ಚುನಾವಣೆಗಳು ನಡೆಯುವಾಗ ನಾನು ಅಧ್ಯಕ್ಷನಾಗುತ್ತೇನೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗುತ್ತದೆ, ದಯವಿಟ್ಟು ಆ ದಿನಕ್ಕಾಗಿ ಕಾಯಿರಿ" ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.

ಇದೇ ವೇಳೆ ತಾವು ಭಾರತ್ ಜೋಡೋ ಯಾತ್ರೆಯನ್ನು (ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ "ಭಾರತ್ ಜೋಡೋ ಯಾತ್ರೆ") ಮುನ್ನಡೆಸುತ್ತಿಲ್ಲ ಮತ್ತು ಅದರಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಅವರು ಹೇಳಿದರು. ದೇಶಕ್ಕಾಗಿ ದುಡಿಯುವುದು ಪ್ರತಿಪಕ್ಷದ ಪ್ರತಿಯೊಬ್ಬರ ಜವಾಬ್ದಾರಿ ಎಂದೂ ರಾಹುಲ್ ಗಾಂಧಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com