ನೂಪುರ್ ಶರ್ಮಾಗೆ ಬಿಗ್ ರಿಲೀಫ್: ಬಂಧನಕ್ಕೆ ಸಂಬಂಧಿಸಿದ ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರು ದ್ವೇಷಪೂರಿತ ಹೇಳಿಕೆ ನೀಡಿರುವುದು ಹಾಗೂ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳುವಂತೆ ಮತ್ತು ಬಂಧಿಸುವಂತೆ.
ನೂಪುರ್ ಶರ್ಮಾ
ನೂಪುರ್ ಶರ್ಮಾ

ನವದೆಹಲಿ: ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರು ದ್ವೇಷಪೂರಿತ ಹೇಳಿಕೆ ನೀಡಿರುವುದು ಹಾಗೂ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳುವಂತೆ ಮತ್ತು ಬಂಧಿಸುವಂತೆ, ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠವು ನೂಪುರ್ ಶರ್ಮಾ ವಿರುದ್ಧದ ಅವರ ಮನವಿಯು ಅಪಾಯವಲ್ಲದ್ದು ಎಂದು ತೋರುತ್ತಿದೆ. ಆದರೆ ದೂರಾಗಾಮಿ ಪರಿಣಾಮವನ್ನು ಹೊಂದಿದೆ ಎಂದು ಅರ್ಜಿದಾರ ವಕೀಲ ಅಬು ಸೋಹೆಲ್ ಅವರಿಗೆ ಹೇಳಿದೆ.

ದೂರು ನೀಡಿದರೂ ಪೊಲೀಸರು ಶರ್ಮಾ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಕೀಲರು ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿದರು. ಶರ್ಮಾ ಅವರ ಹೇಳಿಕೆಗಳು ಸಂವಿಧಾನದ 14, 15, 21, 26 ಮತ್ತು 29 ನೇ ವಿಧಿ ಮತ್ತು ಇತರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿ ಶರ್ಮಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಕೋರಲಾಗಿದೆ.

'ಶರ್ಮಾ ಅವರ ಅನಪೇಕ್ಷಿತ ಮಾತುಗಳು ದೇಶ ಮತ್ತು ಜಗತ್ತಿನಾದ್ಯಂತ ಭಾರೀ ಅಶಾಂತಿ ಮತ್ತು ಕೋಲಾಹಲವನ್ನು ಉಂಟುಮಾಡಿದೆ ಮತ್ತು ನಮ್ಮ ಮಹಾನ್ ರಾಷ್ಟ್ರದ ಪ್ರತಿಷ್ಠೆಯನ್ನು ಹಾಳುಮಾಡಿದೆ' ಎಂದು ವಕೀಲರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com