ರಾಜ್ಯಸಭಾ ಚುನಾವಣೆ: ತ್ರಿಪುರಾ ಮಾಜಿ ಸಿಎಂ ಬಿಪ್ಲಬ್ ಹೆಸರು ಸೂಚಿಸಿದ ಬಿಜೆಪಿ

ಆಡಳಿತಾರೂಢ ಬಿಜೆಪಿ ಶುಕ್ರವಾರ ರಾತ್ರಿ ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರನ್ನು ರಾಜ್ಯದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡಿದೆ.
ಬಿಪ್ಲಬ್ ದೇವ್
ಬಿಪ್ಲಬ್ ದೇವ್

ನವದೆಹಲಿ: ಆಡಳಿತಾರೂಢ ಬಿಜೆಪಿ ಶುಕ್ರವಾರ ರಾತ್ರಿ ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರನ್ನು ರಾಜ್ಯದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನಾಗಿ ನಾಮನಿರ್ದೇಶನ ಮಾಡಿದೆ.

ಸೆಪ್ಟೆಂಬರ್ 22ರಂದು ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಪ್ರಧಾನ ಕಚೇರಿ) ಅರುಣ್ ಸಿಂಗ್ ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ರಾಜ್ಯಸಭಾ ಚುನಾವಣೆಗೆ ದೇಬ್ ಅವರನ್ನು ನಾಮನಿರ್ದೇಶನ ಮಾಡಿದೆ ಎಂದು ಹೇಳಿದ್ದಾರೆ.

ಕೇಂದ್ರ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದ ದೇಬ್, ನನ್ನನ್ನು ತ್ರಿಪುರಾದಿಂದ ರಾಜ್ಯಸಭಾ ಸಂಸದರಾಗಿ ಬಿಜೆಪಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಜಿ, ಅಧ್ಯಕ್ಷ ಜೆಪಿ ನಡ್ಡಾ ಜಿ ಮತ್ತು ಗೃಹ ಸಚಿವ ಅಮಿತ್ ಶಾ ಜಿ ಅವರಿಗೆ ಕೃತಜ್ಞತೆಗಳು. ನಾನು ತ್ರಿಪುರಾ ಮತ್ತು ಅದರ ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡಲು ಬದ್ಧನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ದೇಬ್ ಅವರನ್ನು ಹರಿಯಾಣದ ರಾಜ್ಯ ವೀಕ್ಷಕರನ್ನಾಗಿ ನೇಮಿಸಿದ್ದರು. ಕೇಂದ್ರ ನಾಯಕರ ನಿರ್ದೇಶನದ ಮೇರೆಗೆ ಮೇ 14 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ದೇಬ್, ಮೇಲ್ಮನೆ ಚುನಾವಣೆಯಲ್ಲಿ ಸಿಪಿಐ-ಎಂ ನೇತೃತ್ವದ ಎಡರಂಗದ ಅಭ್ಯರ್ಥಿ ಮತ್ತು ಮಾಜಿ ತ್ರಿಪುರಾ ಹಣಕಾಸು ಸಚಿವ ಭಾನುಲಾಲ್ ಸಹಾ ಅವರನ್ನು ಎದುರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com