'ನನ್ನ ನಿರ್ಧಾರ ಮಾಡಿದ್ದೇನೆ, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿದ್ದರೆ ನಿಮ್ಮ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ

ಕಾಂಗ್ರೆಸ್ ನಲ್ಲಿ ಅಕ್ಟೋಬರ್ ತಿಂಗಳಲ್ಲಿ ರಾಷ್ಟ್ರಾಧ್ಯಕ್ಷರ ಚುನಾವಣೆ ನಡೆಯಲಿದೆ. ಮುಂದಿನ ಅಧ್ಯಕ್ಷರಾಗಬೇಕೆ, ಬೇಡವೇ ಎಂಬ ಬಗ್ಗೆ ನಾನು ನಿರ್ಧಾರ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಿದ್ದಲ್ಲಿ ನಿಮ್ಮ ಮುಂದೆ ಕಾರಣವನ್ನು ನೀಡುತ್ತೇನೆ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಕುತೂಹಲ ಉಳಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಕನ್ಯಾಕುಮಾರಿ: ಕಾಂಗ್ರೆಸ್ ನಲ್ಲಿ ಅಕ್ಟೋಬರ್ ತಿಂಗಳಲ್ಲಿ ರಾಷ್ಟ್ರಾಧ್ಯಕ್ಷರ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಸ್ಪರ್ಧೆ ಮಾಡುತ್ತಾರೆಯೇ, ಅವರೇ ಮುಂದಿನ ಅಧ್ಯಕ್ಷರಾಗುತ್ತಾರೆಯೇ ಎಂಬ ಚರ್ಚೆ ನಡೆಯುತ್ತಿದೆ. ನಿನ್ನೆ ಭಾರತ್ ಜೋಡೋ ಯಾತ್ರೆಯ ಆರಂಭ ದಿನ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಮುಂದಿನ ಅಧ್ಯಕ್ಷರಾಗಬೇಕೆ, ಬೇಡವೇ ಎಂಬ ಬಗ್ಗೆ ನಾನು ನಿರ್ಧಾರ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಿದ್ದಲ್ಲಿ ನಿಮ್ಮ ಮುಂದೆ ಕಾರಣವನ್ನು ನೀಡುತ್ತೇನೆ ಎಂದು ಹೇಳುವ ಮೂಲಕ ಕುತೂಹಲ ಉಳಿಸಿದ್ದಾರೆ. 

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತೀರೋ ಎಂದು ರಾಹುಲ್ ಗಾಂಧಿಯವರಿಗೆ ಪ್ರಶ್ನೆ ಎದುರಾಯಿತು. ರಾಹುಲ್ ಗಾಂಧಿಯವರು ತಮ್ಮ ನಿಲುವಿಗೆ ಅಂಟಿಕೊಳ್ಳುವ ಸಾಧ್ಯತೆಯನ್ನು ಸೂಚಿಸುತ್ತದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳದಿರುವುದು ಹೆಚ್ಚು ಎಂದು ಹೇಳಲಾಗುತ್ತಿದೆ. ಭಾರತ್ ಜೋಡೋ ಯಾತ್ರೆಯು ಪ್ರತಿಪಕ್ಷಗಳ ಒಗ್ಗಟ್ಟನ್ನು ರೂಪಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ನ ಕನ್ಯಾಕುಮಾರಿ-ಕಾಶ್ಮೀರ ಭಾರತ ಜೋಡೋ ಯಾತ್ರೆ ಮೊನ್ನೆ ಬುಧವಾರ ಚಾಲನೆ ಸಿಕ್ಕಿದೆ. ತಾನು ಯಾತ್ರೆಯನ್ನು ಮುನ್ನಡೆಸುತ್ತಿಲ್ಲ ಆದರೆ ಅದರಲ್ಲಿ ಭಾಗವಹಿಸುತ್ತಿದ್ದೇನೆ ಎಂದರು. ಕಾಂಗ್ರೆಸ್ ಅಧ್ಯಕ್ಷರಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಅಧ್ಯಕ್ಷನಾಗುತ್ತೇನೋ ಇಲ್ಲವೋ, ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ನಡೆದಾಗ ಇದು ಸ್ಪಷ್ಟವಾಗುತ್ತದೆ. "ಆ ಸಮಯ ಬರುವವರೆಗೂ ಕಾಯಿರಿ, ನೀವು ನೋಡುತ್ತೀರಿ ಮತ್ತು ನಾನು ನಿಲ್ಲದಿದ್ದರೆ, ನೀವು ನನ್ನನ್ನು 'ಯಾಕೆ ನಿಲ್ಲಲಿಲ್ಲ' ಎಂದು ಕೇಳಬಹುದು, ಅದಕ್ಕೆ ನಾನು ಆಗ ಉತ್ತರಿಸುತ್ತೇನೆ ಎಂದರು. 

ನಾನು ಏನು ಮಾಡಲಿದ್ದೇನೆ ಎಂಬುದರ ಬಗ್ಗೆ ನನ್ನ ಮನಸ್ಸಿನಲ್ಲಿ ಯಾವುದೇ ಗೊಂದಲವಿಲ್ಲ, ಮುಂದಿನ ತಿಂಗಳು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಪುನರುಚ್ಛರಿಸಿದರು.

2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಹುಲ್ ಗಾಂಧಿ ರಾಜೀನಾಮೆ ಹಿಂಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಹಂಗಾಮಿ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಸೆಪ್ಟೆಂಬರ್ 24 ರಂದು ಪ್ರಾರಂಭವಾಗಿ ಸೆಪ್ಟೆಂಬರ್ 30 ರಂದು ಕೊನೆಗೊಳ್ಳಲಿದೆ. ಅಕ್ಟೋಬರ್ 17 ರಂದು ಚುನಾವಣೆ ಮತ್ತು ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.ದೇಶದಲ್ಲಿ ದ್ವೇಷವನ್ನು ಹರಡುವ ಬಿಜೆಪಿ-ಆರ್‌ಎಸ್‌ಎಸ್ ಮಾಡಿದ ಹಾನಿಯನ್ನು ಸರಿಪಡಿಸಲು ಯಾತ್ರೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಪ್ರತಿಯೊಬ್ಬರಿಗೂ ಒಂದೊಂದು ಅಭಿಪ್ರಾಯವಿದೆ, ಬಿಜೆಪಿಗೆ ಒಂದಿದೆ ಮತ್ತು ಆರ್‌ಎಸ್‌ಎಸ್‌ಗೂ ಒಂದು ಅಭಿಪ್ರಾಯವಿದೆ ಎಂದರು.

ಕಾಂಗ್ರೆಸ್‌ನಲ್ಲಿ ನಮಗೆ ಇದು ಪ್ರಯಾಣ ಮತ್ತು ಭಾರತದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವ ಪ್ರಯತ್ನವಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಮಾಡಿದ ಹಾನಿಯನ್ನು ಸರಿಪಡಿಸುವ ಪ್ರಯತ್ನವಾಗಿದೆ ಎಂದರು. ಯಾತ್ರೆಯ ನೇತೃತ್ವದ ಪ್ರಶ್ನೆಗೆ ಉತ್ತರಿಸಿದ ಗಾಂಧಿ, ಕಾಂಗ್ರೆಸ್ ದೇಶಾದ್ಯಂತ ಪಾದಯಾತ್ರೆಯನ್ನು ಮಾಡಲು ನಿರ್ಧರಿಸಿದೆ. ಪಕ್ಷದ ಸದಸ್ಯನಾಗಿ ಮತ್ತು ಅದರ ಸಿದ್ಧಾಂತವನ್ನು ಒಪ್ಪುವ ವ್ಯಕ್ತಿಯಾಗಿ ಭಾಗವಹಿಸುತ್ತಿದ್ದೇನೆ. ಈ ಯಾತ್ರೆಯಲ್ಲಿ ನಾನು ಭಾಗವಹಿಸುವುದರಲ್ಲಿ ಯಾವುದೇ ವಿರೋಧಾಭಾಸವನ್ನು ನಾನು ಕಾಣುತ್ತಿಲ್ಲ ಎಂದು ಗಾಂಧಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com