ಕೆ. ಚಂದ್ರಶೇಖರ ರಾವ್
ದೇಶ
ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷ ಸ್ಥಾಪನೆ: ಊಹಾಪೋಹಗಳಿಗೆ ಕೆಸಿಆರ್ ತೆರೆ!
ಶೀಘ್ರದಲ್ಲಿಯೇ ನೂತನ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಭಾನುವಾರ ಸ್ಪಷ್ಟಪಡಿಸಿದ್ದು, ಈ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಹೈದ್ರಾಬಾದ್: ಶೀಘ್ರದಲ್ಲಿಯೇ ನೂತನ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಭಾನುವಾರ ಸ್ಪಷ್ಟಪಡಿಸಿದ್ದು, ಈ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಇದನ್ನೂ ಓದಿ: ದಸರಾ ವೇಳೆಗೆ ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಸ್ಥಾಪನೆ?
'ತೆಲಂಗಾಣ ಚಳವಳಿ ಆರಂಭಕ್ಕೂ ಮುನ್ನ ನಾವು ಮಾಡಿದಂತೆ ಬುದ್ಧಿಜೀವಿಗಳು, ಅರ್ಥಶಾಸ್ತ್ರಜ್ಞರು ಮತ್ತು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸುದೀರ್ಘ ಚರ್ಚೆಯ ನಂತರ ಪರ್ಯಾಯ ರಾಷ್ಟ್ರೀಯ ಪಕ್ಷ ಕಾರ್ಯಸೂಚಿಯಲ್ಲಿ ಒಮ್ಮತವಿದೆ' ಎಂದು ರಾವ್ ಅವರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.
'ಅತಿ ಶೀಘ್ರದಲ್ಲಿಯೇ ರಾಷ್ಟ್ರೀಯ ಪಕ್ಷ ಸ್ಥಾಪಿಸಲಾಗುವುದು ಮತ್ತು ಅದರ ನೀತಿ ರೂಪಣೆ ಕೆಲಸ ನಡೆಯುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ