ಮುಂಬೈ ಶಾಲೆಯಲ್ಲಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಜವಾನನ ಬಂಧನ: ಪೊಲೀಸರು

ದಕ್ಷಿಣ ಮುಂಬೈನ ಶಾಲಾ ಆವರಣದಲ್ಲಿ ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ಮತ್ತು ಹಿಂಬಾಲಿಸಿದ ಆರೋಪದ ಮೇಲೆ 28 ವರ್ಷದ ಶಾಲಾ ಜವಾನನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಮುಂಬೈ: ದಕ್ಷಿಣ ಮುಂಬೈನ ಶಾಲಾ ಆವರಣದಲ್ಲಿ ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ಮತ್ತು ಹಿಂಬಾಲಿಸಿದ ಆರೋಪದ ಮೇಲೆ 28 ವರ್ಷದ ಶಾಲಾ ಜವಾನನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

15 ವರ್ಷದ ಬಾಲಕಿಯ ಪೋಷಕರು ಆಕೆಯ ವರ್ತನೆಯಲ್ಲಿ ಆದ ಬದಲಾವಣೆಗಳನ್ನು ಗಮನಿಸಿ ಆಕೆ ಓದುತ್ತಿದ್ದ ಕಾನ್ವೆಂಟ್ ಅನ್ನು ಸಂಪರ್ಕಿಸಿದಾಗ ಅಪರಾಧ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.

ಸೆಪ್ಟೆಂಬರ್ 5 ರಂದು ಜವಾನ ಹುಡುಗಿಯನ್ನು ಒಬ್ಬಂಟಿಯಾಗಿ ಕಂಡು ಅನುಚಿತವಾಗಿ ಸ್ಪರ್ಶಿಸಿದ್ದನು. ಅಂದಿನಿಂದ, ಆರೋಪಿ ಗಾಮ್‌ದೇವಿ ಪ್ರದೇಶದಲ್ಲಿರುವ ಶಾಲೆಗೆ ಬರುವುದನ್ನು ನಿಲ್ಲಿಸಿದ್ದ. ನಂತರ ಶಾಲೆಯು ದೂರು ದಾಖಲಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜವಾನ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗೆ ಹಲವು ಬಾರಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಆರೋಪಿಯು ಬಾಲಕಿಯ ಮೊಬೈಲ್ ಸಂಖ್ಯೆಗೆ ವಿಡಿಯೋ ಕರೆಯನ್ನೂ ಮಾಡಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ವಿರುದ್ಧ ಶುಕ್ರವಾರ ಭಾರತೀಯ ದಂಡ ಸಂಹಿತೆ 354-ಎ (ಲೈಂಗಿಕ ಕಿರುಕುಳ), 354-ಡಿ (ಹಿಂಬಾಲಿಸುವುದು), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಶೋಧ ಕಾರ್ಯ ಕೈಗೊಂಡಿದ್ದ ಪೊಲೀಸರು, ಶುಕ್ರವಾರ ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‌ನಿಂದ ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 14 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com