ದುಬೈನಿಂದ ಕೊಚ್ಚಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು

ಶನಿವಾರ ದುಬೈನಿಂದ ಬಂದ ವಿಮಾನದಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ನಂತರ ಇಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಕೊಚ್ಚಿ: ಶನಿವಾರ ದುಬೈನಿಂದ ಬಂದ ವಿಮಾನದಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ನಂತರ ಇಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಿನಿ (56) ಅವರು ದುಬೈನಿಂದ ಕೊಚ್ಚಿಗೆ ಬರುತ್ತಿದ್ದರು. ಆದರೆ, ಹಾರಾಟದ ಸಮಯದಲ್ಲಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

'ವಿಮಾನ ಲ್ಯಾಂಡ್ ಆದ ನಂತರ ಆಕೆಯನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು' ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಕೆಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಸಹಜ ಸಾವಾಗಿರುವುದರಿಂದ ಈ ಬಗ್ಗೆ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com