16 ವರ್ಷದ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ವಿರುದ್ಧ ಪ್ರಕರಣ ದಾಖಲು
ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ 16 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 12th September 2022 04:58 PM | Last Updated: 12th September 2022 05:17 PM | A+A A-

ಪ್ರಾತಿನಿಧಿಕ ಚಿತ್ರ
ಪಿಲಿಭಿತ್: ಇಲ್ಲಿನ ಗ್ರಾಮವೊಂದರಲ್ಲಿ 16 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಅದೇ ಗ್ರಾಮದ ಆರೋಪಿ ತನ್ನ ಮಗಳನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಅಪ್ರಾಪ್ತೆಯ ತಂದೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಜಹಾನಾಬಾದ್) ಪ್ರಭಾಸ್ ಚಂದ್ರ ತಿಳಿಸಿದ್ದಾರೆ.
ಬೆಳಗ್ಗೆ ಬಾಲಕಿ ಕಾಣೆಯಾಗಿದ್ದಾಳೆಂದು ತಿಳಿದ ಆಕೆಯ ಕುಟುಂಬಸ್ಥರು ಹುಡುಕಾಟ ಪ್ರಾರಂಭಿಸಿದಾಗ, ಆಕೆ ಹೊಲದಲ್ಲಿ ಪತ್ತೆಯಾಗಿದ್ದಾಳೆ. ಪ್ರಜ್ಞೆ ಬಂದ ನಂತರ ಆಕೆ ತನ್ನ ಪೋಷಕರಿಗೆ ಘಟನೆ ಬಗ್ಗೆ ತಿಳಿಸಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ.
ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದಲು ಆರೋಪಿ ತಾಯಿ ಒತ್ತಾಯ
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.