ಅಪ್ರಾಪ್ತೆ ಮೇಲೆ ಅತ್ಯಾಚಾರ; ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದಲು ಆರೋಪಿ ತಾಯಿ ಒತ್ತಾಯ

ತಾಯಿ-ಮಗ ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗಾಗಿ ಪ್ರಕರಣ ದಾಖಲಾಗಿದೆ ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನಾಗಪುರ: ಇಲ್ಲಿನ ಜರಿಪತ್ಕಾದ ಹುಡುಗಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಭೋಪಾಲ್‌ನ 22 ವರ್ಷದ ವ್ಯಕ್ತಿ ಮತ್ತು ಆತನ ತಾಯಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಹುಡುಗಿ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಭಾಗವಾಗಿದ್ದು, ಮೇ ತಿಂಗಳಲ್ಲಿ ಭೋಪಾಲ್‌ಗೆ ಹೋಗಿದ್ದಳು ಮತ್ತು ಆರೋಪಿ ಅಭಿಷೇಕ್ ಕುರಿಲ್‌ನನ್ನು ಭೇಟಿಯಾಗಿದ್ದಳು. ಬಳಿಕ ಸಂಬಂಧದ ಆಮಿಷವೊಡ್ಡಿದ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ತಾಯಿ ರಜನಿ (45) ಎಂಬಾಕೆಯ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಇಬ್ಬರು ಸೇರಿ ಬಾಲಕಿಗೆ ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದರು ಎಂದು ದೂರುದಾರರು ತಿಳಿಸಿದ್ದಾರೆ. ಬಾಲಕಿಯ ಮೊಬೈಲ್ ಅನ್ನು ಕದ್ದ ಆರೋಪಿ, ಆಕೆಯ ಅಶ್ಲೀಲ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ತಾಯಿ-ಮಗ ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗಾಗಿ ಪ್ರಕರಣ ದಾಖಲಾಗಿದೆ ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಭಾನುವಾರ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೂರು ವರ್ಷದ ಬಾಲಕಿ ತನ್ನ ಮನೆಯಲ್ಲಿ ಮಲಗಿದ್ದಾಗ ಆಕೆಯನ್ನು ಎತ್ತಿಕೊಂಡು ಬಂದ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 3 ಗಂಟೆ ಸುಮಾರಿಗೆ ಕೈಮೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮೆಹತಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಕಟ್ನಿಯ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಜೈನ್ ತಿಳಿಸಿದ್ದಾರೆ.
ಬಳಿಕ ಎಚ್ಚೆತ್ತುಕೊಂಡ ಕುಟುಂಬಸ್ಥರು ಬಾಲಕಿಯನ್ನು ಹುಡುಕಲು ಆರಂಭಿಸಿದ್ದು, ಆಕೆ ಮನೆಯ ಸಮೀಪವೇ ಪತ್ತೆಯಾಗಿದ್ದಾಳೆ. ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ನೆರೆಹೊರೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದರು.

ಈಮಧ್ಯೆ, ಪೊಲೀಸರ ತುರ್ತು ಸ್ಪಂದನಾ ವಾಹನವು ಆರೋಪಿಯನ್ನು ಹಿಡಿದಿದೆ. ಆದರೆ, ಆತ ವಾಹನದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಬೆಳಿಗ್ಗೆ 8 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು. ಮಗುವಿನ ಕುಟುಂಬದ ಸದಸ್ಯರ ದೂರಿನ ನಂತರ ಹೆಡ್‌ ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ವಿಜಯರಾಘವಗಢ ಆರೋಗ್ಯ ಕೇಂದ್ರದಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಚಿಕಿತ್ಸೆಗಾಗಿ ಜಬಲ್‌ಪುರ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

ಅಪ್ರಾಪ್ತ ವಯಸ್ಸಿನಿಂದಲೂ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ, ವ್ಯಕ್ತಿ ಬಂಧನ

ಅಪ್ರಾಪ್ತ ವಯಸ್ಸಿನಿಂದಲೂ ಮಹಿಳೆಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಕ್ಕಾಗಿ 58 ವರ್ಷದ ಸ್ವಯಂ ಘೋಷಿತ ದೇವಮಾನವನನ್ನು ಭಾನುವಾರ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯ ಕುಟುಂಬವು ಸುರೇಶ್ ಕುಮಾರ್ ರವೀಂದ್ರ ನಾರಾಯಣ್ ಅವಸ್ತಿ ಅವರ 'ದೈವಿಕ' ಶಕ್ತಿಗಳ ಬಗ್ಗೆ ಕೆಲವು ಪರಿಚಯಸ್ಥರಿಂದ ತಿಳಿಸಿದ ನಂತರ ಅವರ ಸಂಪರ್ಕಕ್ಕೆ ಬಂದಿತ್ತು ಎಂದು ವರ್ಸೋವಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಈ ವೇಳೆ ಆಚರಣೆಗಳ ನೆಪದಲ್ಲಿ 2019 ರಿಂದಲೂ ಸಂತ್ರಸ್ತೆ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ. ಆಕೆಯ ಆಕ್ಷೇಪಾರ್ಹ ಫೋಟೊಗಳನ್ನು ಕ್ಲಿಕ್ಕಿಸಿದ್ದಾನೆ ಮತ್ತು ಈ ಚಿತ್ರಗಳನ್ನು ಇಂಟರ್ನೆಟ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಮುಂದುವರೆಸಿದ್ದಾನೆ' ಎಂದು ಅವರು ಹೇಳಿದರು.

ಇತ್ತೀಚೆಗಷ್ಟೇ ಆಕೆ ತನಗಾದ ಸಂಕಷ್ಟದ ಬಗ್ಗೆ ಪೋಷಕರಿಗೆ ತಿಳಿಸಿದ್ದರಿಂದ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.

ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಲ್ಲಿ ಅತ್ಯಾಚಾರ ಮತ್ತು ಇತರ ಅಪರಾಧಗಳಿಗಾಗಿ ಆತನನ್ನು ಭಾನುವಾರ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com