ಸಿಕಂದರಾಬಾದ್ ಅಗ್ನಿ ದುರಂತ: ಹೊಟೆಲ್, ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್!
ತೆಲಂಗಾಣದ ಸಿಕಂದರಾಬಾದ್ ನಲ್ಲಿ 8 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Published: 13th September 2022 11:47 AM | Last Updated: 13th September 2022 04:02 PM | A+A A-

ಸಿಕಂದರಾಬಾದ್ ಅಗ್ನಿ ದುರಂತ
ಸಿಕಂದರಾಬಾದ್: ತೆಲಂಗಾಣದ ಸಿಕಂದರಾಬಾದ್ ನಲ್ಲಿ 8 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಸಿಕಂದರಾಬಾದ್‌ನ ರೂಬಿ ಪ್ರೈಡ್ ಎಂಬ ಐಷಾರಾಮಿ ಹೋಟೆಲ್ ಕಟ್ಟಡದ ನೆಲ ಮಹಡಿಯಲ್ಲಿರುವ ಇ-ಬೈಕ್ ಶೋರೂಮ್‌ನಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ ನಂತರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಈ ವರೆಗೂ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಕಂದರಾಬಾದ್ ಪೊಲೀಸರು ರೂಬಿ ಪ್ರೈಡ್ ಹೊಟೆಲ್ ಮತ್ತು ಲಾಡ್ಜ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸಿಕಂದರಾಬಾದ್ ಹೊಟೆಲ್ ಅಗ್ನಿಅವಘಡ: ಪ್ರಧಾನಿ ಮೋದಿ ಸಂತಾಪ, ಸಂತ್ರಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಣೆ
ಘಟನೆಯಲ್ಲಿ ಆಂಧ್ರಪ್ರದೇಶ, ದೆಹಲಿ, ಚೆನ್ನೈ, ಬಿಹಾರ ಸೇರಿದಂತೆ ಹಲವು ರಾಜ್ಯಗಳ ಜನರು ಸಾವನ್ನಪ್ಪಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ತೆಲಂಗಾಣ ಸರ್ಕಾರ ತನಿಖೆಗೆ ಆದೇಶಿಸಿತ್ತು. ಇದೀಗ ರೂಬಿ ಪ್ರೈಡ್ ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
#UPDATE | Case registered against the owner of the building and the lodge where fire broke out. FIR registered against the owners of the Electric Scooter showroom and the manager of Lodge: Chandana Deepti, DCP, North Zone, Hyderabad https://t.co/T5chM4bjbf
— ANI (@ANI) September 13, 2022
ಇ- ಬೈಕ್ ಬ್ಯಾಟರ್ ಅಥವಾ ಜನರೇಟರ್ ಸ್ಫೋಟಗೊಂಡಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಇದನ್ನೂ ಓದಿ: ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ; 8 ಮಂದಿ ಸಾವು, ಹಲವರು ಗಂಭೀರ
ಈ ಕುರಿತು ಮಾತನಾಡಿರುವ ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಮಹಮೂದ್ ಅಲಿ ಅವರು, ಘಟನೆ ತುಂಬಾ ದುರದೃಷ್ಟಕರ. ಅಗ್ನಿಶಾಮಕ ದಳದ ತಂಡಗಳು ಲಾಡ್ಜ್‌ನಿಂದ ಜನರನ್ನು ರಕ್ಷಿಸಲು ಪ್ರಯತ್ನಿಸಿದವು ಆದರೆ ಭಾರೀ ಹೊಗೆಯಿಂದಾಗಿ ಕೆಲವರು ಸಾವನ್ನಪ್ಪಿದ್ದಾರೆ. ಕೆಲವರನ್ನು ಲಾಡ್ಜ್‌ನಿಂದ ರಕ್ಷಿಸಲಾಗಿದೆ. ಘಟನೆ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು.