ಕಾಂಗ್ರೆಸ್‌ ಅಂತ್ಯವಾಗಿದೆ: ಗುಜರಾತ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿಕೆ

ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 'ಕಾಂಗ್ರೆಸ್ ಅಂತ್ಯವಾಗಿದೆ' ಎಂದು ಗುಜರಾತ್‌ನಲ್ಲಿ ಇಂದು ಘೋಷಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ಅಹಮದಾಬಾದ್: ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 'ಕಾಂಗ್ರೆಸ್ ಅಂತ್ಯವಾಗಿದೆ' ಎಂದು ಗುಜರಾತ್‌ನಲ್ಲಿ ಇಂದು ಘೋಷಿಸಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಎರಡು ದಿನಗಳ ಕಾಲ ಗುಜರಾತ್‌ ಪ್ರವಾಸದಲ್ಲಿರುವ ಕೇಜ್ರಿವಾಲ್, ಪೌರ ಕಾರ್ಮಿಕರೊಂದಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು.

ಪಂಜಾಬ್‌ನ ಎಎಪಿ ಸರ್ಕಾರವು ದಿವಾಳಿತನದ ಅಂಚಿನಲ್ಲಿದ್ದರೂ ಮತ್ತು ಸಂಬಳಕ್ಕೂ ಹಣವಿಲ್ಲದಿದ್ದರೂ ಗುಜರಾತ್‌ಗಾಗಿ ಜಾಹೀರಾತುಗಳಿಗಾಗಿ ಕೋಟಿಗಟ್ಟಲೆ ಖರ್ಚು ಮಾಡುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪಕ್ಕೆ ಪ್ರತಿಕ್ರಿಯಿಸುವಂತೆ ವರದಿಗಾರರೊಬ್ಬರು ಕೇಳಿದ ಪ್ರಶ್ನಿಗೆ ಉತ್ತರಿಸಿದ ಅವರು, 'ಈ ಪ್ರಶ್ನೆಯನ್ನು ಯಾರು ಕೇಳಿದರು' ಕೇಜ್ರಿವಾಲ್ ವರದಿಗಾರರನ್ನು ಪ್ರಶ್ನಿಸಿದರು.

ಇದು ಕಾಂಗ್ರೆಸ್ ನಾಯಕರ ಆರೋಪ ಎಂದಾಗ, 'ಕಾಂಗ್ರೆಸ್ ಅಂತ್ಯವಾಗಿದೆ. ಅವರ ಪ್ರಶ್ನೆಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ. ಈ ಬಗ್ಗೆ ಜನರಿಗೆ ಸ್ಪಷ್ಟತೆ ಇದೆ. ಅವರ ಪ್ರಶ್ನೆಗಳಿಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ' ಎಂದಿದ್ದಾರೆ.

ಕಾಂಗ್ರೆಸ್ ಬದಲಿಗೆ ಎಎಪಿಯನ್ನು ಬಿಜೆಪಿಯ ಪ್ರಮುಖ ಪ್ರತಿಸ್ಪರ್ಧಿ ಎಂದು ಬಿಂಬಿಸಲಾಗುತ್ತಿದೆ. ಹೀಗಾಗಿ ಎಲ್ಲಿಯೂ ಇಲ್ಲದ ಪಕ್ಷ ಕಾಂಗ್ರೆಸ್‌ಗೆ ಹಾಕುವ ತಮ್ಮ ಮತಗಳನ್ನು ವ್ಯರ್ಥ ಮಾಡಬೇಡಿ ಎಂದು ಅವರು ಮತದಾರರನ್ನು ಕೋರಿದರು. ರಾಜ್ಯದಲ್ಲಿ ಬಿಜೆಪಿ ಆಡಳಿತವನ್ನು ಬಯಸದ ಜನರಿದ್ದಾರೆ ಮತ್ತು ಅವರು ಕಾಂಗ್ರೆಸ್‌ಗೆ ಮತ ಹಾಕಲು ಇಷ್ಟಪಡುವುದಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ನಾವೇ ಪರ್ಯಾಯವಾಗಿರುವುದರಿಂದ ಅವರ ಮತಗಳನ್ನು ನಾವು ಪಡೆಯಬೇಕು ಎಂದು ಅವರು ಹೇಳಿದರು.

ಕೇಜ್ರಿವಾಲ್ ಅವರು ಗುಜರಾತ್‌ನಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಮುಖ್ಯಮಂತ್ರಿಯಾಗಿ ತರಲು ಬಯಸುತ್ತಿದ್ದಾರೆ ಎನ್ನುವ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, 'ನರೇಂದ್ರ ಮೋದಿ ನಂತರ, ಸೋನಿಯಾ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು  ಬಿಜೆಪಿ ಯೋಜಿಸುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದರೆ, ಅದರ ಬಗ್ಗೆ ಅವರು ಏನು ಹೇಳುತ್ತಾರೆ?' ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com