ಪತ್ರಕರ್ತ ಸಿದ್ದಿಕಿ ಕಪ್ಪನ್
ಪತ್ರಕರ್ತ ಸಿದ್ದಿಕಿ ಕಪ್ಪನ್

ಜಾಮೀನು ಸಿಕ್ಕರೂ ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ ಇಲ್ಲ ಬಿಡುಗಡೆ ಭಾಗ್ಯ

ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರೂ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಕಪ್ಪನ್ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣ ಇನ್ನೂ ಬಾಕಿ ಉಳಿದಿರುವ ಕಾರಣ...
Published on

ಲಖನೌ: ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರೂ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಕಪ್ಪನ್ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣ ಇನ್ನೂ ಬಾಕಿ ಉಳಿದಿರುವ ಕಾರಣ ಅವರು ಜೈಲಿನಲ್ಲಿಯೇ ಇರಲಿದ್ದಾರೆ ಎಂದು ಕಾರಾಗೃಹ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

2020ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಹಾಥರಸ್‌ಗೆ ತೆರಳುತ್ತಿದ್ದಾಗ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕಿ ಕಪ್ಪನ್‌ ಅವರಿಗೆ ಕಳೆದ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆದರೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣ ಇನ್ನೂ ಬಾಕಿಯಿರುವುದರಿಂದ ಕಪ್ಪನ್ ಜೈಲಿನಲ್ಲಿಯೇ ಉಳಿಯಲಿದ್ದಾರೆ ಎಂದು ಜೈಲಿನ ಡಿಜಿ ಪ್ರೊ ಸಂತೋಷ್ ವರ್ಮಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಕಪ್ಪನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ(ಎಎಸ್ಜೆ) ಅನುರೋಧ್ ಮಿಶ್ರಾ ಅವರು ಅವರಿಗೆ ತಲಾ 1 ಲಕ್ಷ ರೂ.ಗಳ ಎರಡು ಶ್ಯೂರಿಟಿ ಮತ್ತು ಅದೇ ಮೊತ್ತದ ವೈಯಕ್ತಿಕ ಬಾಂಡ್ ಅನ್ನು ಒದಗಿಸುವಂತೆ ಸೂಚಿಸಿದ್ದರು.

ಸುಮಾರು ಎರಡು ವರ್ಷಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ನ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಉತ್ತರ ಪ್ರದೇಶದ ಪೊಲೀಸರು ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರನ್ನು ಬಂಧಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com