ಬಿಜೆಪಿಯಿಂದ ‘ನಬನ್ನಾ’ ಮುತ್ತಿಗೆ ಯತ್ನ: ಸುವೇಂದು ಅಧಿಕಾರಿ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ

ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು...
ಸುವೇಂದು ಅಧಿಕಾರಿ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ
ಸುವೇಂದು ಅಧಿಕಾರಿ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ

ಕೊಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನಾ ಮೆರವಣಿಗೆ ಮೂಲಕ ಕೊಲ್ಕತ್ತಾದ ರಾಜ್ಯ ಕಾರ್ಯಾಲಯ ‘ನಬನ್ನಾ’ಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುವೇಂದು ಅಧಿಕಾರಿ, ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಮತ್ತು ರಾಹುಲ್ ಸಿನ್ಹಾ ಸೇರಿದಂತೆ ಪಕ್ಷದ ಇತರ ನಾಯಕರನ್ನು ಸೆಕ್ರೆಟರಿಯೇಟ್ ಬಳಿಯ ಎರಡನೇ ಹೂಗ್ಲಿ ಸೇತುವೆಯ ಬಳಿಗೆ ಬರುತ್ತಿದ್ದಂತೆ ಪೊಲೀಸರು ತಡೆದು ಜೈಲು ವ್ಯಾನ್‌ನಲ್ಲಿ ಕರೆದೊಯ್ದರು.

ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳವನ್ನು ಉತ್ತರ ಕೊರಿಯಾವನ್ನಾಗಿ ಮಾಡಿದ್ದಾರೆ ಎಂದು ಸುವೇಂದು ಅಧಿಕಾರಿ ವಾಗ್ದಾಳಿ ನಡೆಸಿದ್ದರು.

“ಮುಖ್ಯಮಂತ್ರಿ ಮಮತಾ ಅವರಿಗೆ ಜನರ ಬೆಂಬಲವಿಲ್ಲ ಮತ್ತು ಅವರು ಬಂಗಾಳದಲ್ಲಿ ಉತ್ತರ ಕೊರಿಯಾದಂತೆಯೇ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿದ್ದಾರೆ. ಸರ್ಕಾರ ಹೇಳಿದಂತೆ ನಡೆದುಕೊಳ್ಳುತ್ತಿರುವ ಪೊಲೀಸರು ಬೆಲೆ ತೆರಬೇಕಾಗುತ್ತದೆ. ಮುಂದೆ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ” ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ನೂರಾರು ಬಿಜೆಪಿ ಬೆಂಬಲಿಗರು ಇಂದು ಬೆಳಗ್ಗೆ ಕೋಲ್ಕತ್ತಾ ಮತ್ತು ನೆರೆಯ ಹೌರಾಕ್ಕೆ ‘ನಬನ್ನಾ ಅಭಿಯಾನ್’ ಅಥವಾ ಸೆಕ್ರೆಟರಿಯೇಟ್‌ಗೆ ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿದರು. 

ಸುವೇಂದು ಅಧಿಕಾರಿ ಸಂತ್ರಗಚಿ ಪ್ರದೇಶದಿಂದ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದರೆ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಉತ್ತರ ಕೋಲ್ಕತ್ತಾದಿಂದ ಪ್ರತಿಭಟನೆಯನ್ನು ಮುನ್ನಡೆಸುವ ನಿರೀಕ್ಷೆಯಿದೆ. ಬಿಜೆಪಿಯ ಬೃಹತ್ ಪ್ರತಿಭಟನೆಯನ್ನು ತಡೆಯಲು ಪೊಲೀಸರು ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

“ಟಿಎಂಸಿ ಸರ್ಕಾರವು ಸಾರ್ವಜನಿಕ ದಂಗೆಗೆ ಹೆದರುತ್ತಿದೆ. ಅವರು ನಮ್ಮ ಪ್ರತಿಭಟನಾ ಮೆರವಣಿಗೆಯನ್ನು ನಿಲ್ಲಿಸಲು ಪ್ರಯತ್ನಿಸಿದರೂ, ನಾವು ಶಾಂತಿಯುತವಾಗಿ ವಿರೋಧಿಸುತ್ತೇವೆ. ಯಾವುದೇ ಅಹಿತಕರ ಬೆಳವಣಿಗೆಗೆ ರಾಜ್ಯ ಆಡಳಿತವು ಜವಾಬ್ದಾರಿಯಾಗಿರುತ್ತದೆ” ಎಂದು ದಿಲೀಪ್ ಘೋಷ್ ಇಂದು ಬೆಳಗ್ಗೆ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com