ಕೋವಿಡ್-19: ಕಳೆದ 24 ಗಂಟೆಗಳಲ್ಲಿ 5,108 ಹೊಸ ಪ್ರಕರಣ, 19 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,108 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,10,057ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
Published: 14th September 2022 11:26 AM | Last Updated: 14th September 2022 11:27 AM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,108 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,10,057ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 45,749ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 12 ಸೇರಿದಂತೆ 19 ಮಂದಿ ಸಾವಿಗೀಡಾಗಿದ್ದು, ಈವರೆಗೆ 52,82,16 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
#COVID19 | India reports 5,108 fresh cases and 5,675 recoveries in the last 24 hours.
Active cases 45,749
Daily positivity rate 1.44% pic.twitter.com/8pLlkkonRx— ANI (@ANI) September 14, 2022
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.10 ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 186 ಸೇರಿ ರಾಜ್ಯದಲ್ಲಿ 344 ಮಂದಿಗೆ ಪಾಸಿಟಿವ್; 3 ಸಾವು
ದೈನಂದಿನ ಪಾಸಿಟಿವಿಟಿ ದರ ಶೇ 1.44 ರಷ್ಟಿದ್ದು, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 215.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ. 24 ಗಂಟೆಗಳ ಅವಧಿಯಲ್ಲಿ 19,25,881 ಡೋಸ್‌ಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.