ಎಂಟು ಕಾಂಗ್ರೆಸ್ ಶಾಸಕರು ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರಿದ್ದಾರೆ: ಗೋವಾ ಸಿಎಂ ಪ್ರಮೋದ್ ಸಾವಂತ್

ಕಾಂಗ್ರೆಸ್‌ನ ಎಂಟು ಶಾಸಕರು ಬೇಷರತ್ತಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬುಧವಾರ ಹೇಳಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಪಣಜಿ: ಕಾಂಗ್ರೆಸ್‌ನ ಎಂಟು ಶಾಸಕರು ಬೇಷರತ್ತಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬುಧವಾರ ಹೇಳಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ಅವರೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾವಂತ್, 40 ಸದಸ್ಯ ಬಲದ ವಿಧಾನಸಭೆಯಲ್ಲಿ ಎಂಟು ಹೊಸ ಸದಸ್ಯರೊಂದಿಗೆ ಬಿಜೆಪಿಯ ಬಲ 28ಕ್ಕೆ ಏರಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸೇರಿದಂತೆ ಕಾಂಗ್ರೆಸ್‌ನ 11 ಶಾಸಕರ ಪೈಕಿ ಎಂಟು ಶಾಸಕರು ಇಂದು ಬಿಜೆಪಿ ಸೇರಿದ್ದಾರೆ ಎಂದು ಸಾವಂತ್ ಹೇಳಿದ್ದಾರೆ.

"ಇಂದಿನ ಬೆಳವಣಿಗೆಯೊಂದಿಗೆ, ಬಿಜೆಪಿ ಈಗ 33 ಶಾಸಕರ ಬೆಂಬಲವನ್ನು ಹೊಂದಿದೆ.(ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ ಇಬ್ಬರು ಮತ್ತು ಮೂವರು ಪಕ್ಷೇತರರು ಸೇರಿದಂತೆ) ಈ 8 ಕಾಂಗ್ರೆಸ್ ಶಾಸಕರು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ" ಎಂದು ಸಾವಂತ್ ತಿಳಿಸಿದರು.

ಗೋವಾದಿಂದ 'ಕಾಂಗ್ರೆಸ್ ಛೋಡೋ ಯಾತ್ರೆ' ಆರಂಭವಾಗಿದೆ ಎಂದು ಹೇಳಿರುವ ಸಾವಂತ್, ಮುಂದಿನ ಚುನಾವಣೆಯಲ್ಲಿ ಗೋವಾದಲ್ಲಿ ಮತ್ತೊಂದು ಲೋಕಸಭಾ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com