ಗುಜರಾತ್ ಕರಾವಳಿಯಲ್ಲಿ ಆರು ಪಾಕಿಸ್ತಾನಿಗಳ ಬಂಧನ, 200 ಕೋಟಿ ರೂ. ಮೌಲ್ಯದ 40 ಕೆಜಿ ಹೆರಾಯಿನ್ ಜಪ್ತಿ
ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಲ್ಲಿದ್ದ 200 ಕೋಟಿಗೂ ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಟಿಎಸ್ ಹಿರಿಯ ಅಧಿಕಾರಿಯೊಬ್ಬರು...
Published: 14th September 2022 02:39 PM | Last Updated: 14th September 2022 02:39 PM | A+A A-

ಸಾಂದರ್ಭಿಕ ಚಿತ್ರ
ಅಹಮದಾಬಾದ್: ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಲ್ಲಿದ್ದ 200 ಕೋಟಿಗೂ ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಟಿಎಸ್ ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೆರಾಯಿನ್ ಪತ್ತೆಯಾಗಿದ್ದು, ದೋಣಿಯಲ್ಲಿದ್ದ ಆರು ಪಾಕಿಸ್ತಾನಿಗಳನ್ನೂ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕೋಸ್ಟ್ ಗಾರ್ಡ್ ಮತ್ತು ಎಟಿಎಸ್‌ನ ಜಂಟಿ ತಂಡ, ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಮೀನುಗಾರಿಕಾ ದೋಣಿಯನ್ನು ಸಮುದ್ರದ ಮಧ್ಯದಲ್ಲಿ ತಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಹೆರಾಯಿನ್ ಅನ್ನು ಗುಜರಾತ್ ಕರಾವಳಿಯಲ್ಲಿ ಇಳಿಸಿದ ನಂತರ ರಸ್ತೆ ಮೂಲಕ ಪಂಜಾಬ್‌ಗೆ ಸಾಗಿಸಲು ಉದ್ದೇಶಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ, ನಾವು ಪಾಕಿಸ್ತಾನದಿಂದ ಹೊರಟಿದ್ದ ದೋಣಿಯನ್ನು ತಡೆದು, 40 ಕೆಜಿ ಹೆರಾಯಿನ್‌ನೊಂದಿಗೆ ಆರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.