ಕಾಂಗ್ರೆಸ್ ಛೋಡೋ ಯಾತ್ರೆ: ಲೋಬೋ, ಕಾಮತ್ ಸೇರಿ 8 ಮಂದಿ ಗೋವಾ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ
ಗೋವಾದ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು, ಮಾಜಿ ಸಿಎಂ ದಿಗಂಬರ್ ಕಾಮತ್ ಸೇರಿದಂತೆ 8 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾದರು.
Published: 14th September 2022 11:37 AM | Last Updated: 14th September 2022 02:07 PM | A+A A-

ಸಿಎಂ ಸಾವಂತ್ ಭೇಟಿ ಮಾಡಿದ ಬಿಜೆಪಿಗೆ ಹೊಸದಾಗಿ ಸೇರ್ಪಡೆಗೊಂಡ ಶಾಸಕರು
ಪಣಜಿ: ಗೋವಾದ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು, ಮಾಜಿ ಸಿಎಂ ದಿಗಂಬರ್ ಕಾಮತ್ ಸೇರಿದಂತೆ 11 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಯಾದರು.
ಗೋವಾ ಸಿಎಂ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಕಾಂಗ್ರೆಸ್ ನ ಶಾಸಕರು ಬಿಜೆಪಿ ಸೇರಿದ್ದು, 40 ಸದಸ್ಯರಿರುವ ರಾಜ್ಯ ವಿಧಾನಸಭೆಯಲ್ಲಿ ಈಗ ಕಾಂಗ್ರೆಸ್ ನ ಸಂಖ್ಯಾಬಲ ಕೇವಲ 3 ಕ್ಕೆ ಕುಸಿದಿದೆ.
ಇದೇ ಮಾದರಿಯಲ್ಲಿ 2019 ರಲ್ಲಿ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದರು. ಈ ವರ್ಷದ ಮಾರ್ಚ್ ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡಿತ್ತು.
ಇದನ್ನೂ ಓದಿ: ಗೋವಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ: ಇಬ್ಬರು ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಗೆ 'ಕೈ' ಮನವಿ
ಮಾಜಿ ಸಿಎಂ, ದಿಗಂಬರ್ ಕಾಮತ್, ಮೈಕಲ್ ಲೋಬೋ, ಅವರ ಪತ್ನಿ ಡೆಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೊ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಬಿಜೆಪಿ ಸೇರಿರುವ ಶಾಸಕರಾಗಿದ್ದಾರೆ.