ಸುಪ್ರೀಂ, ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು ಹೆಚ್ಚಿಸಲು ಸಂವಿಧಾನ ತಿದ್ದುಪಡಿಗೆ ವಕೀಲರ ಸಂಘ ಬೆಂಬಲ

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು ಕ್ರಮವಾಗಿ 67 ಮತ್ತು 65 ಕ್ಕೆ ಹೆಚ್ಚಿಸಲು ಸಂವಿಧಾನ ತಿದ್ದುಪಡಿ ಮಾಡಲು ದೇಶದ ಎಲ್ಲಾ ವಕೀಲರ ಸಂಘಗಳು ಸರ್ವಾನುಮತದ ಬೆಂಬಲ ನೀಡಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು ಕ್ರಮವಾಗಿ 67 ಮತ್ತು 65 ಕ್ಕೆ ಹೆಚ್ಚಿಸಲು ಸಂವಿಧಾನ ತಿದ್ದುಪಡಿ ಮಾಡಲು ದೇಶದ ಎಲ್ಲಾ ವಕೀಲರ ಸಂಘಗಳು ಸರ್ವಾನುಮತದ ಬೆಂಬಲ ನೀಡಿವೆ.

ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ), ರಾಜ್ಯ ಬಾರ್ ಕೌನ್ಸಿಲ್‌ಗಳು ಮತ್ತು ಹೈಕೋರ್ಟ್ ಬಾರ್ ಅಸೋಸಿಯೇಷನ್‌ ಪದಾಧಿಕಾರಿಗಳು ಕಳೆದ ವಾರ ನಡೆಸಿದ ಜಂಟಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿದೆ.

ಪ್ರಸ್ತುತ, ಸಂವಿಧಾನದ ಪ್ರಕಾರ, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು 65 ಇದ್ದು, ಹೈಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು 62 ಇದೆ.

“ಕಳೆದ ವಾರ ನಡೆದ ಎಲ್ಲಾ ರಾಜ್ಯಗಳ ಬಾರ್ ಕೌನ್ಸಿಲ್‌ಗಳು, ಹೈಕೋರ್ಟ್ ಬಾರ್ ಅಸೋಸಿಯೇಶನ್‌ಗಳು ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಪದಾಧಿಕಾರಿಗಳ ಜಂಟಿ ಸಭೆಯಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ. ಇದನ್ನು ಕೂಲಂಕುಷವಾಗಿ ಪರಿಗಣಿಸಿದ ನಂತರ ತಕ್ಷಣವೇ ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕು ಮತ್ತು ಹೈಕೋರ್ಟ್‌ನ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 62 ರಿಂದ 65 ವರ್ಷಗಳಿಗೆ ಮತ್ತು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 67 ವರ್ಷಕ್ಕೆ ಹೆಚ್ಚಿಸಬೇಕು ಎಂದು ಸಭೆಯು ಸರ್ವಾನುಮತದ ನಿರ್ಣಯ ತೆಗೆದುಕೊಂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com