ಬಿಜೆಪಿಯೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ, ಪರಿವಾರ ಸಮೇತ ಕೇಸರಿ ಪಕ್ಷ ಸೇರಲಿರುವ ಅಮರಿಂದರ್ ಸಿಂಗ್!

ಕಾಂಗ್ರೆಸ್‌ ವಿರುದ್ಧ ಕಿಡಿಕಾರಿ, ಪಕ್ಷದಿಂದ ಹೊರಬಂದಿದ್ದ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಹೊಸ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ ಸೆಪ್ಟೆಂಬರ್ 19 ರಂದು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್
ಕ್ಯಾಪ್ಟನ್ ಅಮರಿಂದರ್ ಸಿಂಗ್

ಚಂಡೀಗಢ: ಕಾಂಗ್ರೆಸ್‌ ವಿರುದ್ಧ ಕಿಡಿಕಾರಿ, ಪಕ್ಷದಿಂದ ಹೊರಬಂದಿದ್ದ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಹೊಸ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ ಸೆಪ್ಟೆಂಬರ್ 19 ರಂದು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದೆ.

ಕಳೆದ ವರ್ಷಾಂತ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಅವರನ್ನು ಸಿಎಂ ಸ್ಥಾನದಿಂದ ಅಮರಿಂದರ್ ಸಿಂಗ್ ಅವರನ್ನು ಕೆಳಗಿಳಿಸಿದ್ದರಿಂದ ಸಿಡಿದೆದ್ದಿದ್ದ ಅವರು, ಹೊಸ ರಾಜಕೀಯ ಪಕ್ಷ 'ಪಂಜಾಬ್ ಲೋಕ ಕಾಂಗ್ರೆಸ್' ಅನ್ನು ರಚಿಸಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಹಿರಿಯ ನಾಯಕ ಔಪಚಾರಿಕವಾಗಿ ಬಿಜೆಪಿ ಸೇರಲಿದ್ದಾರೆ. ಅಷ್ಟೇ ಅಲ್ಲದೆ, ಮಗ ರಣ್ ಇಂದರ್ ಸಿಂಗ್, ಪುತ್ರಿ ಜೈ ಇಂದರ್ ಕೌರ್, ಮೊಮ್ಮಗ ನಿರ್ವಾನ್ ಸಿಂಗ್ ಕೂಡ ಬಿಜೆಪಿ ಸೇರುವ ನಿರೀಕ್ಷೆಯಿದೆ. ಅಮರಿಂದರ್ ಸದ್ಯ ಲಂಡನ್‌ನಲ್ಲಿದ್ದು, ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ.

ಹಿಂದಿನ ಪಟಿಯಾಲ ರಾಜಮನೆತನದ ವಂಶಸ್ಥ ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಿಂಗ್, ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ ನಂತರ ಕಾಂಗ್ರೆಸ್ ತೊರೆದು ಪಿಎಲ್‌ಸಿ ಪಕ್ಷವನ್ನು ಸ್ಥಾಪಿಸಿದ್ದರು. ಈ ಪಕ್ಷ 2022ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಸುಖದೇವ್ ಸಿಂಗ್ ದಿಂಡ್ಸಾ ನೇತೃತ್ವದ ಶಿರೋಮಣಿ ಅಕಾಲಿ ದಳ (ಸಂಯುಕ್ತ್) ಜೊತೆ ಮೈತ್ರಿ ಮಾಡಿಕೊಂಡಿತ್ತು.

ಆದಾಗ್ಯೂ, ಪಿಎಲ್‌ಸಿ ಅಭ್ಯರ್ಥಿಗಳಲ್ಲಿ ಯಾರೊಬ್ಬರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಅಮರಿಂದರ್ ಸ್ವತಃ ತಮ್ಮ ತವರು ಕ್ಷೇತ್ರ ಪಟಿಯಾಲಾ ನಗರ ಸ್ಥಾನದಿಂದ ಸೋತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com