ದೆಹಲಿ ಅಬಕಾರಿ ನೀತಿ ಪ್ರಕರಣ: ಬೆಂಗಳೂರು ಸೇರಿ ಹಲವು ಕಡೆಗಳ ಮೇಲೆ ಇಡಿ ದಾಳಿ

ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಇಂದು ಶುಕ್ರವಾರ ದಾಳಿ ನಡೆಸಿದೆ.
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ

ಬೆಂಗಳೂರು: ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಇಂದು ಶುಕ್ರವಾರ ದಾಳಿ ನಡೆಸಿದೆ.

ಬೆಂಗಳೂರು, ಮಂಗಳೂರು, ಹೈದರಾಬಾದ್, ಚೆನ್ನೈ ಸೇರಿದಂತೆ 40ಕ್ಕೂ ಹೆಚ್ಚು ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ ಶೋಧ ಕಾರ್ಯ ಮುಂದುವರಿದಿದೆ. ಬೆಳ್ಳಂಬೆಳಗ್ಗೆ ರೇಡ್​ ಮಾಡಿರುವ ಇಡಿ ಅಧಿಕಾರಿಗಳು 50ಕ್ಕೂ ಹೆಚ್ಚು ಕಡೆ ಪರಿಶೀಲನೆ ನಡೆಸುತ್ತಿದ್ದಾರೆ.

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಗಳ ಬಗ್ಗೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ದೇಶಾದ್ಯಂತ ಸುಮಾರು 40 ಸ್ಥಳಗಳಲ್ಲಿ ಹೊಸ ಹೊಸ ದಾಳಿ ನಡೆಸಿದೆ. ನೆಲ್ಲೂರು ಮತ್ತು ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ದೆಹಲಿ-ಎನ್‌ಸಿಆರ್‌ನ ಇತರ ಕೆಲವು ನಗರಗಳಲ್ಲಿ ಮದ್ಯದ ಉದ್ಯಮಿಗಳು, ವಿತರಕರು ಮತ್ತು ಸರಬರಾಜು ಜಾಲಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 6 ರಂದು ದೇಶದಾದ್ಯಂತ ಸುಮಾರು 45 ಸ್ಥಳಗಳಲ್ಲಿ ಮೊದಲ ಬಾರಿಗೆ ದಾಳಿ ನಡೆಸಿದ್ದ ಇಡಿಯು ಇದೀಗ ಎರಡನೇ ಸುತ್ತಿನ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯ (ED) ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ಸಿಬಿಐ ಎಫ್ಐಆರ್ ದಾಖಲಿಸಿದೆ, ಇದರಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಕೆಲವು ಅಧಿಕಾರಿಗಳನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.

ಆರೋಪಿಗಳನ್ನಾಗಿ ಮಾಡಲಾಗಿದೆ. ಅಬಕಾರಿ ನೀತಿಯನ್ನು ಈಗ ಹಿಂದಕ್ಕೆ ತೆಗೆದುಕೊಳ್ಳಲಾಗಿದೆ.ಸಿಬಿಐ ಆಗಸ್ಟ್ 19 ರಂದು ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ದೆಹಲಿಯ ಮಾಜಿ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಅವರ ದೆಹಲಿ ನಿವಾಸಗಳು ಮತ್ತು ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 19 ಇತರ ಸ್ಥಳಗಳನ್ನು ಒಳಗೊಂಡಂತೆ ದಾಳಿ ನಡೆಸಿತ್ತು. ಸಿಸೋಡಿಯಾ ಅವರು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಅಬಕಾರಿ ಮತ್ತು ಶಿಕ್ಷಣ ಸೇರಿದಂತೆ ಅನೇಕ ಖಾತೆಗಳನ್ನು ಹೊಂದಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಹೊರತಂದಿರುವ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮಗಳು ನಡೆದಿದೆ ಎಂದು ಕೇಳಿಬರುತ್ತಿರುವ ಆರೋಪ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮತ್ತು ಸಚಿವ ಸತ್ಯೇಂದ್ರ ಜೈನ್ ಅವರನ್ನು ಶುಕ್ರವಾರ ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ತಿಹಾರ್ ಜೈಲಿನಲ್ಲಿ ಪ್ರಶ್ನಿಸುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com