ಮಕ್ಕಳಲ್ಲಿ ಜ್ವರ ಪ್ರಕರಣ ಹೆಚ್ಚಳ: ಪುದುಚೇರಿ ಶಾಲೆಗಳಿಗೆ ರಜೆ ಘೋಷಣೆ
ಮಕ್ಕಳಲ್ಲಿ ಜ್ವರ ತರಹದ ಕಾಯಿಲೆ ಹೆಚ್ಚಿದ ಹಿನ್ನೆಲೆಯಲ್ಲಿ ಶನಿವಾರದಿಂದ ಸೆಪ್ಟೆಂಬರ್ 25 ರವರೆಗೆ ಒಂದರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚುವುದಾಗಿ ಪುದುಚೇರಿ ಸರ್ಕಾರ ಶುಕ್ರವಾರ ಘೋಷಿಸಿದೆ.
Published: 16th September 2022 10:56 PM | Last Updated: 16th September 2022 11:04 PM | A+A A-

ಪುದುಚೇರಿ ಶಾಲೆಯೊಂದರ ಮುಂಭಾಗ ನಿಂತಿರುವ ಪೋಷಕರ ಚಿತ್ರ
ಕಾರೈಕಲ್: ಮಕ್ಕಳಲ್ಲಿ ಜ್ವರ ತರಹದ ಕಾಯಿಲೆ ಹೆಚ್ಚಿದ ಹಿನ್ನೆಲೆಯಲ್ಲಿ ಶನಿವಾರದಿಂದ ಸೆಪ್ಟೆಂಬರ್ 25 ರವರೆಗೆ ಒಂದರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮುಚ್ಚುವುದಾಗಿ ಪುದುಚೇರಿ ಸರ್ಕಾರ ಶುಕ್ರವಾರ ಘೋಷಿಸಿದೆ.
ಈ ಸಂಬಂಧ ಪುದುಚೇರಿ ಮತ್ತು ಕಾರೈಕಲ್ ಪ್ರದೇಶ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವಿಜಿ ಶಿವಗಾಮಿ ಸುತ್ತೋಲೆ ಹೊರಡಿಸಿದ್ದಾರೆ.
ಆರೋಗ್ಯ ಇಲಾಖೆಯ ಶಿಫಾರಸಿನ ಮೇರೆಗೆ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕಳೆದ 10 ದಿನಗಳಲ್ಲಿ, ಮಕ್ಕಳಲ್ಲಿ ಜ್ವರ ಪ್ರಕರಣಗಳಲ್ಲಿ ಕನಿಷ್ಠ ಶೇಕಡಾ 50 ರಷ್ಟು ಏರಿಕೆಯಾಗಿದೆ ಮತ್ತು ಆಸ್ಪತ್ರೆಗಳಲ್ಲಿ ಅವರು ದಾಖಲಾಗುವ ಪ್ರಮಾಣವೂ ಹೆಚ್ಚುತ್ತಿದೆ ಎಂದು ಆರೋಗ್ಯ ಇಲಾಖೆಯ ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಜ್ವರ, ಕೆಮ್ಮು ಮತ್ತು ಶೀತದ ದೂರುಗಳೊಂದಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬರುತ್ತಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.