45 ವರ್ಷಗಳಲ್ಲಿಯೇ ನಿರುದ್ಯೋಗ ಪ್ರಮಾಣ ಸಾರ್ವಕಾಲಿಕ ಮಟ್ಟಕ್ಕೆ ಏರಿಕೆ: ರಾಹುಲ್ ಗಾಂಧಿ

ದೇಶದಲ್ಲಿ 45 ವರ್ಷಗಳಲ್ಲಿಯೇ ನಿರುದ್ಯೋಗ ಸಾರ್ವಕಾಲಿಕ ಮಟ್ಟಕ್ಕೆ ಏರಿಕೆಯಾಗಿದ್ದು,ಯುವಜನರ ಭವಿಷ್ಯವನ್ನು ಬಲಪಡಿಸುವುದು ಮತ್ತು ದೇಶದ ಯುವಕರ ಮನಸ್ಸಿನಲ್ಲಿ ಸಕಾರಾತ್ಮಕತೆಯನ್ನು ತರುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ .
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ಕೊಲ್ಲಂ: ದೇಶದಲ್ಲಿ 45 ವರ್ಷಗಳಲ್ಲಿಯೇ ನಿರುದ್ಯೋಗ ಸಾರ್ವಕಾಲಿಕ ಮಟ್ಟಕ್ಕೆ ಏರಿಕೆಯಾಗಿದ್ದು,ಯುವಜನರ ಭವಿಷ್ಯವನ್ನು ಬಲಪಡಿಸುವುದು ಮತ್ತು ದೇಶದ ಯುವಕರ ಮನಸ್ಸಿನಲ್ಲಿ ಸಕಾರಾತ್ಮಕತೆಯನ್ನು ತರುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ

'ಭಾರತ್ ಜೋಡೊ ಯಾತ್ರೆ'ಯ ಒಂಬತ್ತನೇ ದಿನ ಕೇರಳದ  ಕೊಲ್ಲಂನ ಕರುನಾಗಪಲ್ಲಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು,  ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಶ್ರೀಮಂತ ಉದ್ಯಮಿಗಳನ್ನು ರಕ್ಷಿಸಲು ಆಸಕ್ತಿ ಹೊಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ ಈಗ ದೇಶದ ನಾಯಕನ ನಿಕಟವರ್ತಿಯಾಗಿದ್ದಾರೆ ಎಂದು ಹೇಳಿದರು.

ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ನಾನು ಅನೇಕ ಯುವಕರನ್ನು ಭೇಟಿಯಾಗುತ್ತಿದ್ದೇನೆ ಮತ್ತು ಸರ್ಕಾರದಿಂದ ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುತ್ತಿದ್ದೇನೆ ಎಂದು ಗಾಂಧಿ ಹೇಳಿದರು. ದೇಶವು ಯುವ ಶಕ್ತಿಯನ್ನು ಸದುಪಯೋಗಪಡಿಸಿಕೊಂಡರೆ, ರಾಷ್ಟ್ರವು ಅತ್ಯಂತ ವೇಗವಾಗಿ ಬೆಳೆಯುತ್ತದೆ ಎಂದು ಹೇಳಿದರು.

ನಾನು ಸರಳ ಪ್ರಶ್ನೆ ಕೇಳಲು ಬಯಸುತ್ತೇನೆ. ಭಾರತವು ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯನ್ನು ಹೊಂದಿದ್ದರೂ ನಾವು ಏಕೆ ಅತಿ ಹೆಚ್ಚು ನಿರುದ್ಯೋಗ ಮಟ್ಟವನ್ನು ಹೊಂದಿದ್ದೇವೆ ಎಂದು ಪ್ರಶ್ನಿಸಿದರು. ಸರ್ಕಾರವು ಶ್ರೀಮಂತ ಉದ್ಯಮಿಗಳನ್ನು ಮಾತ್ರ ರಕ್ಷಿಸಲು ಆಸಕ್ತಿ ವಹಿಸಿದೆ. ಇದರಿಂದಾಗಿ ದೇಶದಲ್ಲಿ ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.

ಸಾರ್ವಜನಿಕ ವಲಯದ ಕಂಪನಿಗಳ ಖಾಸಗೀಕರಣ ಮತ್ತು ಹೂಡಿಕೆ ಹಿಂತೆಗೆತದಿಂದಾಗಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದರು. ಸಾರ್ವಜನಿಕ ವಲಯದ ಉದ್ಯಮವನ್ನು ಯಾರು ನೋಡಿಕೊಳುತ್ತಿದ್ದಾರೆ? ಅದು ದೇಶದ ಐದಾರು ಉದ್ಯಮಿಗಳ ಬಳಿಗೆ ಹೋಗುತ್ತಿದೆ. ಉದ್ಯಮಿಗಳು ಸರ್ಕಾರದ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com