ಪ್ರಧಾನಿ ನರೇಂದ್ರ ಮೋದಿಗೆ 72ನೇ ಹುಟ್ಟುಹಬ್ಬ ಸಂಭ್ರಮ: ಇಂದು ಹಲವು ಕಾರ್ಯಕ್ರಮಗಳಲ್ಲಿ ಭಾಗಿ, ಶುಭಾಶಯಗಳ ಸುರಿಮಳೆ

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಇಂದು ಸೆಪ್ಟೆಂಬರ್ 17ರಂದು ಹುಟ್ಟುಹಬ್ಬದ ಸಂಭ್ರಮ. 72 ವರ್ಷ ಪೂರೈಸಿ 73ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ಅವರು ಇಂದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಇಂದು ಸೆಪ್ಟೆಂಬರ್ 17ರಂದು ಹುಟ್ಟುಹಬ್ಬದ ಸಂಭ್ರಮ. 72 ವರ್ಷ ಪೂರೈಸಿ 73ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ಅವರು ಇಂದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 

ಅವರ ಹುಟ್ಟುಹಬ್ಬದ ಅಂಗವಾಗಿ ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ನಮಿಬಿಯಾದ ವಿಂಡೋಕ್ ನಿಂದ 8 ಚೀತಾಗಳು ಮಧ್ಯ ಪ್ರದೇಶದ ಗ್ವಾಲಿಯರ್ ಗೆ ಬಂದಿಳಿಯಲಿದ್ದು ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ 10.45ಕ್ಕೆ 8 ಚಿರತೆಗಳಲ್ಲಿ 3 ಚೀತಾಗಳನ್ನು ಉದ್ಯಾನವನಕ್ಕೆ ಬಿಡಲಿದ್ದಾರೆ. 

ಪ್ರಧಾನಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇಂದಿನಿಂದ ಅಕ್ಟೋಬರ್ 2 ಗಾಂಧಿ ಜಯಂತಿಯವರೆಗೆ 21 ದಿನಗಳ ಸೇವೆ ಮತ್ತು ಸಮರ್ಪಣೆ ಅಭಿಯಾನ ಹಮ್ಮಿಕೊಂಡಿದೆ. ಅತಿ ಹೆಚ್ಚು ಕೋವಿಡ್ ಲಸಿಕೆ ನೀಡುವ ಮೂಲಕ ದಾಖಲೆ ನಿರ್ಮಿಸುವ ಯೋಜನೆ ಬಿಜೆಪಿಗಿದೆ.

ರಾಜಕೀಯ ನಾಯಕರು, ಗಣ್ಯರ ಶುಭಾಶಯ: ಬೆಳಗ್ಗೆಯಿಂದಲೇ ಪಕ್ಷಬೇಧ ಮರೆತು ಎಲ್ಲಾ ರಾಜಕೀಯ ಮುಖಂಡರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಮೊನ್ನೆ ಉಜ್ಬೆಕಿಸ್ತಾನಕ್ಕೆ ತೆರಳಿದ್ದ ಪ್ರಧಾನಿ ಕಳೆದ ತಡರಾತ್ರಿ ಸ್ವದೇಶಕ್ಕೆ ಆಗಮಿಸಿದ್ದಾರೆ.

ನಿನ್ನೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎಸ್‌ಸಿಒ ಸಭೆಯ ಬದಿಯಲ್ಲಿ ಪ್ರಧಾನಿ ಮೋದಿಯವರಿಗೆ ಶುಭ ಹಾರೈಸಿದ್ದಾರೆ. ರಷ್ಯಾದ ಸಂಪ್ರದಾಯದ ಪ್ರಕಾರ, ನಾವು ಎಂದಿಗೂ ಮುಂಚಿತವಾಗಿ ಅಭಿನಂದನೆಗಳನ್ನು ನೀಡುವುದಿಲ್ಲ, ಆದ್ದರಿಂದ ನಾನು ಇದೀಗ ಅದನ್ನು ಮಾಡಲು ಸಾಧ್ಯವಿಲ್ಲ. ಆದರೂ ನಿಮಗೆ ಮುಖತಃ ಶುಭಾಶಯ ತಿಳಿಸಬೇಕೆಂದು ಇಂದು ಹೇಳುತ್ತಿದ್ದೇನೆ ಎಂದು ನಿನ್ನೆ ಶುಭಾಶಯ ಹೇಳಿದ್ದರು. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಪ್ರಧಾನಿ ಮೋದಿ ಅವರೊಂದಿಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹಾರೈಸಿದ್ದಾರೆ. ನಾಗರಿಕರಲ್ಲಿ ಆವರಿಸಿರುವ ಕತ್ತಲೆಯನ್ನು ಹೋಗಲಾಡಿಸಲು ಮತ್ತು ಅವರಿಗೆ ಪ್ರಗತಿ, ಅಭಿವೃದ್ಧಿ ಮತ್ತು ಸಾಮಾಜಿಕ ಸಾಮರಸ್ಯದ ಬೆಳಕನ್ನು ತರಲು ಪ್ರಧಾನಿಗಳು ಕೆಲಸ ಮಾಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಹಾರೈಸಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂದರ್ಭದಲ್ಲಿ, ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಬಹು ನಿರೀಕ್ಷಿತ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಬಿಡುಗಡೆ ಮಾಡಲಿದ್ದಾರೆ. ಇತರ ಶ್ರೀಮಂತ ರಾಷ್ಟ್ರಗಳಿಗಿಂತ ಭಾರತವು ಹೆಚ್ಚಿನ ಲಾಜಿಸ್ಟಿಕ್ಸ್ ವೆಚ್ಚವನ್ನು ಹೊಂದಿರುವುದರಿಂದ ರಾಷ್ಟ್ರೀಯ ನೀತಿಯ ಅಗತ್ಯವಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಹೇಳಿಕೊಂಡಿದೆ.

ಕಾರ್ಯತಂತ್ರದ ಗುರಿಯು ಭಾರತೀಯ ಸರಕುಗಳನ್ನು ಹೆಚ್ಚು ಸ್ಪರ್ಧಾತ್ಮಕವಾಗಿಸುವುದು, ಆದ್ದರಿಂದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು ಮತ್ತು ಉದ್ಯೋಗದ ಸಾಧ್ಯತೆಗಳನ್ನು ವಿಸ್ತರಿಸುವುದು. ಭಾರತವು ತನ್ನ ಜಿಡಿಪಿಯ ಶೇಕಡಾ 13 ರಿಂದ 14 ರ ನಡುವೆ ಲಾಜಿಸ್ಟಿಕ್ಸ್ ವೆಚ್ಚಗಳಿಗಾಗಿ ಖರ್ಚು ಮಾಡುತ್ತದೆ. ಜಪಾನ್ ಮತ್ತು ಜರ್ಮನಿಯಂತಹ ರಾಷ್ಟ್ರಗಳು, ಹೆಚ್ಚು ಅಭಿವೃದ್ಧಿ ಹೊಂದಿದ ಮೂಲಸೌಕರ್ಯ ಮತ್ತು ಲಾಜಿಸ್ಟಿಕ್ಸ್‌ಗೆ ಸಂಬಂಧಿಸಿದ ಕಾರ್ಯವಿಧಾನಗಳಿಗೆ ಹೆಸರುವಾಸಿಯಾಗಿದೆ, ಲಾಜಿಸ್ಟಿಕ್ಸ್‌ಗೆ ತಮ್ಮ GDP ಯ 8% ರಿಂದ 9% ರಷ್ಟು ಖರ್ಚು ಮಾಡುತ್ತವೆ.

20 ಕ್ಕೂ ಹೆಚ್ಚು ಸರ್ಕಾರಿ ಸಂಸ್ಥೆಗಳು, 37 ರಫ್ತು ಪ್ರಚಾರ ಮಂಡಳಿಗಳು, 40 ಪಾಲುದಾರ ಸರ್ಕಾರಿ ಏಜೆನ್ಸಿಗಳು (PGA), 500 ಪ್ರಮಾಣೀಕರಣಗಳು ಮತ್ತು 10,000 ಕ್ಕೂ ಹೆಚ್ಚು ಸರಕುಗಳು ಲಾಜಿಸ್ಟಿಕ್ಸ್ ಉದ್ಯಮದಲ್ಲಿ ತೊಡಗಿಸಿಕೊಂಡಿವೆ. ಲಾಜಿಸ್ಟಿಕ್ ನೀತಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದೇಶೀಯ ಉತ್ಪನ್ನಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವಾಗ ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತದೆ. ಇದು ಲಾಜಿಸ್ಟಿಕ್ಸ್ ಮಾರುಕಟ್ಟೆಗೆ ರಾಷ್ಟ್ರದ ಮೊದಲ ಎಲ್ಲಾ ಅಂತರ್ಗತ ತಂತ್ರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com