ರಾಹುಲ್ ಗಾಂಧಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿಸಲು ನಿರ್ಣಯ ಅಂಗೀಕರಿಸಿದ ರಾಜಸ್ಥಾನ ಕಾಂಗ್ರೆಸ್ 

ರಾಹುಲ್ ಗಾಂಧಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಲು ರಾಜಸ್ಥಾನ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಜೈಪುರ: ರಾಹುಲ್ ಗಾಂಧಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿ ಮಾಡಲು ರಾಜಸ್ಥಾನ ಕಾಂಗ್ರೆಸ್ ನಿರ್ಣಯವನ್ನು ಅಂಗೀಕರಿಸಿದೆ.

ಸೆ.17 ರಂದು ಪ್ರದೇಶ ಕಾಂಗ್ರೆಸ್ ಸಮಿತಿ ಅವಿರೋಧವಾಗಿ ಈ ನಿರ್ಣಯವನ್ನು ಅಂಗೀಕರಿಸಿದೆ ಎಂದು ರಾಜ್ಯ ಸಂಪುಟ ಸಚಿವರೊಬ್ಬರು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿರ್ಣಯವನ್ನು ಪ್ರಸ್ತಾಪಿಸಿದರು ಎಂದು ರಾಜಸ್ಥಾನ ಆಹಾರ ಸಚಿವ ಪ್ರತಾಪ್ ಸಿಂಗ್ ಕಚಾರಿಯಾ ಹೇಳಿದ್ದಾರೆ.ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಎಐಸಿಸಿ ಸದಸ್ಯರನ್ನು ನೇಮಕ ಮಾಡುವುದು ಪಕ್ಷದ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯ ಎಂದು ಕಚಾರಿಯಾ ಹೇಳಿದ್ದು, ಪಕ್ಷದ ರಾಜ್ಯದ ಉಸ್ತುವಾರಿ ಅಜಯ್ ಮಕೇನ್, ಸಂಘಟನೆಯ ಚುನಾವಣಾ ಅಧಿಕಾರಿ (ಪಿಆರ್ ಒ) ರಾಜೇಂದ್ರ ಕುಂಪಾವತ್, ರಾಜ್ಯ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಹಾಗೂ ಇತರ ಪಕ್ಷದ ಜಿಲ್ಲಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

ಕಾಂಗ್ರೆಸ್ ಅಧ್ಯಕ್ಷರ ಹುದ್ದೆ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಸೆ.24 ರಿಂದ ಸೆ.30 ವರೆಗೆ ಅವಕಾಶವಿದೆ. ನಾಮಪತ್ರ ಸಲ್ಲಿಕೆ ಆಧಾರದಲ್ಲಿ ಅಗತ್ಯ ಎದುರಾದಲ್ಲಿ ಅ.17 ರಂದು ಚುನಾವಣೆ ನಡೆಯಲಿದೆ.

2017 ರಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿದ್ದಾಗಲೂ ರಾಜಸ್ಥಾನದ ಕಾಂಗ್ರೆಸ್ ಇದೇ ಮಾದರಿ ನಿರ್ಣಯ ಅಂಗೀಕರಿಸಿತ್ತು.
 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com