ಕೋವಿಡ್-19: 24 ಗಂಟೆಗಳಲ್ಲಿ 5,664 ಹೊಸ ಪ್ರಕರಣ, ಕೇರಳದಲ್ಲಿ 21 ಜನ ಸೇರಿ 35 ಮಂದಿ ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 5,664 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,34,188ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,922ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
Published: 18th September 2022 11:03 AM | Last Updated: 18th September 2022 11:03 AM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 5,664 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,34,188ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,922ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 21 ಜನರು ಸೇರಿ 35 ಜನರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,28,337 ಜನರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11ರಷ್ಟು ಸಕ್ರಿಯ ಪ್ರಕಣರಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
#COVID19 | India reports 5,664 fresh cases and 4,555 recoveries, in the last 24 hours.
— ANI (@ANI) September 18, 2022
Active cases 47,922
Daily positivity rate 1.96% pic.twitter.com/I4Byb5ZOBZ
ದೈನಂದಿನ ಪಾಸಿಟಿವಿಟಿ ದರ ಶೇ 1.96 ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.79ರಷ್ಟಿದೆ. ದೇಶದಲ್ಲಿ ಈವರೆಗೆ 4,39,57,929 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 216.56 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.