ಚಂಡೀಗಡ ವಿವಿ ಹಾಸ್ಟೆಲ್ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್: ನಟ ಸೋನು ಸೂದ್ ಹೇಳಿದ್ದು ಹೀಗೆ..
ಚಂಡೀಗಡ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ.
Published: 18th September 2022 05:03 PM | Last Updated: 18th September 2022 05:05 PM | A+A A-

ಬಾಲಿವುಡ್ ನಟ ಸೋನು ಸೂದ್
ಚಂಡೀಗಡ: ಚಂಡೀಗಡ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ಯಾವುದೇ ವಿಡಿಯೋಗಳನ್ನು ವಾಟ್ಸಾಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡದಂತೆ ಜನರಲ್ಲಿ ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್: ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಈ ಕುರಿತು ಟ್ವೀಟ್ ಮಾಡಿರುವ ಸೋನು ಸೂದ್, ಚಂಡೀಗಡ ವಿಶ್ವವಿದ್ಯಾಲಯದಲ್ಲಿ ನಡೆದಿರುವುದು ತುಂಬಾ ದುರದೃಷ್ಟಕರ. ನಾವು ನಮ್ಮ ಸಹೋದರಿಯರೊಂದಿಗೆ ನಿಲ್ಲಬೇಕಾದ ಸಮಯವಿದು. ಇದು ಸಮಾಜಕ್ಕೆ ಮಾದರಿಯಾಗಬೇಕಾದ ಸಮಯ, ನಮಗೆ ಪರೀಕ್ಷಾ ಸಮಯವೂ ಹೌದು, ಜವಾಬ್ದಾರಿಯುತವಾಗಿರಿ ಎಂದು ಅವರು ಹೇಳಿದ್ದಾರೆ.
Something that happened in Chandigarh University is very unfortunate. It’s time for us to stand with our sisters and set an example of a responsible society. These are testing times for us, not for the victims.
— sonu sood (@SonuSood) September 18, 2022
Be responsible