ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆ; ಪಿಎಲ್ ಸಿ ಪಕ್ಷ ವಿಲೀನ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ವಿಲೀನಗೊಳಿಸಿದ ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಸೇರ್ಪಡೆಗೊಂಡ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್
ಬಿಜೆಪಿ ಸೇರ್ಪಡೆಗೊಂಡ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ವಿಲೀನಗೊಳಿಸಿದ ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಅಮರಿಂದರ್ ಸಿಂಗ್ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಎರಡು ಬಾರಿ ಮಾಜಿ ಮುಖ್ಯಮಂತ್ರಿಯಾಗಿದ್ದ ಅವರು ಹಿಂದಿನ ಪಟಿಯಾಲ ರಾಜಮನೆತನದ ಕುಡಿ.

ದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾದರು. ಪಂಜಾಬ್ ಮುಖ್ಯಮಂತ್ರಿ ಪುತ್ರ ರಣೀಂದರ್ ಸಿಂಗ್ ಮತ್ತು ಪುತ್ರಿ ಜೈ ಇಂದರ್ ಕೌರ್ ಅವರ ಕೂಡ ಕಾಂಗ್ರೆಸ್ ತೊರೆದು ಕೇಸರಿ ಪಕ್ಷಕ್ಕೆ ಸೇರಲಿದ್ದಾರೆ, ಜೊತೆಗೆ ರಾಜ್ಯದ ಇತರ ಕೆಲವು ನಾಯಕರು ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ.

ಅಮರಿಂದರ್ ಸಿಂಗ್ ಅವರೊಂದಿಗೆ ಏಳು ಮಾಜಿ ಶಾಸಕರು ಮತ್ತು ಒಬ್ಬ ಮಾಜಿ ಸಂಸದ ಕೂಡ ಬಿಜೆಪಿ ಸೇರಲಿದ್ದಾರೆ. ಅಮರಿಂದರ್ ಸಿಂಗ್ ಅವರು ತಮ್ಮ ಪಿಎಲ್‌ಸಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್‌ಸಿ) ವಕ್ತಾರ ಪ್ರೀತ್ಪಾಲ್ ಸಿಂಗ್ ಬಲಿವಾಲ್ ಶುಕ್ರವಾರ ಹೇಳಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com