ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಸೋನಿಯಾ ಗಾಂಧಿ ಭೇಟಿ ಮಾಡಿದ ಗೆಹ್ಲೋಟ್, ನಾಳೆ ಕೊಚ್ಚಿಯಲ್ಲಿ ರಾಹುಲ್ ಗಾಂಧಿ ಭೇಟಿ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷರ ಚುನಾವಣಾ ಕಣಕ್ಕೆ ಪ್ರವೇಶಿಸುವ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಭೇಟಿ ಮಾಡಿದ್ದಾರೆ.
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಎಐಸಿಸಿ ಅಧ್ಯಕ್ಷರ ಚುನಾವಣಾ ಕಣಕ್ಕೆ ಪ್ರವೇಶಿಸುವ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬುಧವಾರ ಭೇಟಿ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಕುರಿತು ಗೆಹ್ಲೋಟ್ ಮತ್ತು ಸೋನಿಯಾ ಗಾಂಧಿ ಅವರು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ಅವರು ಸೋನಿಯಾ ಗಾಂಧಿ ಅವರನ್ನು ಅವರ 10, ಜನಪಥ್ ನಿವಾಸದಲ್ಲಿ ಭೇಟಿಯಾಗಿದ್ದು, ನಂತರ ಮುಂಬೈಗೆ ತೆರಳುವ ನಿರೀಕ್ಷೆಯಿದೆ.

ಗೆಹ್ಲೋಟ್ ಅವರು ಗುರುವಾರ ಕೊಚ್ಚಿಗೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪಕ್ಷದ ಸಾರಥ್ಯ ವಹಿಸಿಕೊಳ್ಳುವಂತೆ ಮನವೊಲಿಸುವ ಕೊನೆಯ ಪ್ರಯತ್ನ ಮಾಡುವ ನಿರೀಕ್ಷೆಯಿದೆ.

ಇದಕ್ಕು ಮುನ್ನ ಕಾಂಗ್ರೆಸ್ ಅಧ್ಯಕ್ಷರ ಚುನಾವಣಾ ಕಣಕ್ಕಿಳಿಯುವ ಸೂಚನೆ ನೀಡಿದ್ದ ಗೆಹ್ಲೋಟ್, ಪಕ್ಷದ ಜನರು ಬಯಸಿದರೆ ನಾನು ನಾಮಪತ್ರ ಸಲ್ಲಿಸುತ್ತೇನೆ ಮತ್ತು ತನಗೆ ನೀಡಿದ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಹೇಳಿದರು.

ಆದರೆ, ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರ ಮನವೊಲಿಸುವ ಕೊನೆಯ ಪ್ರಯತ್ನ ಮಾಡುವುದಾಗಿಯೂ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com