ಪಂಜಾಬ್ ನ ಖಾಸಗಿ ವಿವಿ ಹಾಸ್ಟೆಲ್ ರೂಂನಲ್ಲಿ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ: ಭಾರೀ ಪ್ರತಿಭಟನೆ

ರಾಜ್ಯದ ಜಲಂಧರ್ ಬಳಿಯ ಖಾಸಗಿ ವಿಶ್ವವಿದ್ಯಾಲಯದಲ್ಲಿ ನಿನ್ನೆ ಮಂಗಳವಾರ ತಡರಾತ್ರಿ ಕೇರಳದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. 
ವಿವಿ ಹೊರಗೆ ಪ್ರತಿಭಟನೆ
ವಿವಿ ಹೊರಗೆ ಪ್ರತಿಭಟನೆ

ಚಂಡೀಗಢ: ರಾಜ್ಯದ ಜಲಂಧರ್ ಬಳಿಯ ಖಾಸಗಿ ವಿಶ್ವವಿದ್ಯಾಲಯದಲ್ಲಿ ನಿನ್ನೆ ಮಂಗಳವಾರ ತಡರಾತ್ರಿ ಕೇರಳದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. 

ಚಂಡೀಗಢದ ಬಳಿಯ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ ಆಕ್ಷೇಪಾರ್ಹ ವಿವಾದಾತ್ಮಕ ವಿಡಿಯೊ ವೈರಲ್ ಆದ ನಂತರ ಭಾರೀ ಪ್ರತಿಭಟನೆ ನಡೆದಿತ್ತು. ಅದರಲ್ಲಿ ನಾಲ್ವರು ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿದೆ. ಇದಾಗ ಬಳಿಕ ಕೆಲವೇ ದಿನಗಳಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕೇರಳ ಮೂಲದ ಡಿಸೈನಿಂಗ್‌ನ ಪ್ರಥಮ ವರ್ಷದ ವಿದ್ಯಾರ್ಥಿ 21 ವರ್ಷದ ಅಗ್ನಿ ಎಸ್ ದಿಲೀಪ್ ಎಂಬುವವರು ನಿನ್ನೆ ತಡರಾತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಕೋಣೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದುಕೊಂಡಿದ್ದರು. ಇದರಿಂದ ನಿನ್ನೆ ರಾತ್ರಿ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಕಳೆದ 10 ದಿನಗಳಲ್ಲಿ ಕ್ಯಾಂಪಸ್ ಒಳಗೆ ಇದು ಎರಡನೆಯ ಆತ್ಮಹತ್ಯೆ ಪ್ರಕರಣವಾಗಿದ್ದು, ಮೊದಲನೇ ಪ್ರಕರಣವನ್ನು ಹೊರಗೆ ಬೆಳಕಿಗೆ ಬಾರದಂತೆ ಮುಚ್ಚಿಹಾಕಲಾಗಿತ್ತು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಎರಡೂ ಆತ್ಮಹತ್ಯೆ ಪ್ರಕರಣಗಳ ಹಿಂದಿನ ಕಾರಣಗಳನ್ನು ತಿಳಿಯಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ವಿಶ್ವವಿದ್ಯಾಲಯದ ಆಡಳಿತವು ಈ ವಿಷಯದ ಬಗ್ಗೆ ಮೌನವಾಗಿದೆ. ಮತ್ತೊಂದೆಡೆ, ಸ್ಥಳೀಯ ಆಡಳಿತ ಮತ್ತು ಪೊಲೀಸರು ವಿದ್ಯಾರ್ಥಿಗಳ ಆರೋಪಗಳನ್ನು ನಿರಾಕರಿಸಿದ್ದಾರೆ. 

ವಿವಿ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ನೂರಾರು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಯತ್ನಿಸಿದರು.

ಕಪುರ್ತಲದ ಹಿರಿಯ ಪೊಲೀಸ್ ಅಧೀಕ್ಷಕ ನವನೀತ್ ಸಿಂಗ್ ಬೈನ್ಸ್ ಅವರು ವಿದ್ಯಾರ್ಥಿಯ ಕೊಠಡಿಯಿಂದ ಡೆತ್ ನೋಟ್ ಪಡೆದಿದ್ದಾರೆ, ಅದರಲ್ಲಿ ವೈಯಕ್ತಿಕ ಕಾರಣಗಳು ಆತ್ಮಹತ್ಯೆಗೆ ಕಾರಣವೆಂದು ಉಲ್ಲೇಖಿಸಲಾಗಿದೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಸಿವಿಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಬೈನ್ಸ್ ಪೊಲೀಸರು ಪ್ರಕರಣವನ್ನು ಸರಿಯಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಾರೆ ಎಂದು ಭರವಸೆ ನೀಡಿದರು.

ವಿದ್ಯಾರ್ಥಿಯ ಸಾವಿನಿಂದ ದುಃಖಿತವಾಗಿರುವ ವಿಶ್ವವಿದ್ಯಾನಿಲಯವು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, "ದುರದೃಷ್ಟಕರ ಘಟನೆಯಿಂದ ಎಲ್‌ಪಿಯು ಸಹೋದರರು ದುಃಖಿತರಾಗಿದ್ದಾರೆ. ಪೊಲೀಸರ ಆರಂಭಿಕ ತನಿಖೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ವೈಯಕ್ತಿಕ ಕಾರಣಗಳನ್ನು ನೀಡಲಾಗಿದೆ. ವಿಶ್ವವಿದ್ಯಾನಿಲಯವು ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com