ಪಿಎಂ ಕೇರ್ಸ್ ಫಂಡ್ ನ ಟ್ರಸ್ಟಿಯಾಗಿ ರತನ್ ಟಾಟಾ, ಸಲಹಾ ಮಂಡಳಿಗೆ ಸುಧಾ ಮೂರ್ತಿ ನೇಮಕ
ನವದೆಹಲಿ: ಪಿಎಂ ಕೇರ್ಸ್ ಫಂಡ್ ನ ಟ್ರಸ್ಟಿಯಾಗಿ ಕೈಗಾರಿಕೋದ್ಯಮಿ ರತನ್ ಟಾಟಾ ಅವರನ್ನು ಹಾಗೂ ಸಲಹಾ ಮಂಡಳಿಗೆ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ಪಿಎಂ ಕೇರ್ಸ್ ಫಂಡ್ ಟ್ರಸ್ಟ್‌ಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಕೆ ಟಿ ಥಾಮಸ್, ಮಾಜಿ ಡೆಪ್ಯೂಟಿ ಸ್ಪೀಕರ್ ಕರಿಯಾ ಮುಂಡಾ ಅವರು ನಾಮನಿರ್ದೇಶನಗೊಂಡಿದ್ದಾರೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಟ್ರಸ್ಟಿಗಳನ್ನು ಪಿಎಂ ಕೇರ್ಸ್ ಫಂಡ್‌ನ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸಲು ಸ್ವಾಗತಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಿಎಂ ಕೇರೀಸ್ ಫಂಡ್‌ನ ಇತರ ಟ್ರಸ್ಟಿಗಳಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ ಒಂದು ದಿನದ ನಂತರ ಈ ಘೋಷಣೆ ಹೊರಡಿಸಲಾಗಿದೆ.
ಇನ್ನು ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್(ಸಿಎಜಿ) ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ಫಂಡ್ ನ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ